ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧುಮ್ಮಿಕ್ಕುತ್ತಿರುವ ಜೋಗದ ವೈಭವ ನೋಡಲು ಮುಗಿಬಿದ್ದ ಪ್ರವಾಸಿಗರು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ.15: ಜೋಗ ಜಲಪಾತ ಮತ್ತೆ ಧುಮ್ಮಿಕ್ಕುತ್ತಿದೆ. ಕಳೆದ ವರ್ಷ ಮಳೆಯಿಲ್ಲದೆ ಬರಡಾಗಿ ನಿಂತಿದ್ದ ಜೋಗದ ಗುಂಡಿ ಈ ವರ್ಷ ತನ್ನ ವೈಭವ ಮರಳಿ ಪಡೆದಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹೌದು, ಜೂನ್ ಮತ್ತು ಜುಲೈ ತಿಂಗಳ ಆರಂಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ನದಿಗಳೆಲ್ಲ ತುಂಬಿ ಹರಿಯುತ್ತಿವೆ. 831 ಅಡಿಗಳ ಮೇಲಿಂದ ಧುಮ್ಮಿಕ್ಕುವ ಜೋಗ ಜಲಪಾತ ನೋಡಲು ಪ್ರವಾಸಿ ಮುಗಿಬೀಳುತ್ತಿದ್ದಾರೆ.

ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಅಂದಾಜು 30 ಸಾವಿರಕ್ಕೂ ಅಧಿಕ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಮತ್ತು ಭಾನುವಾರ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜೋಗವನ್ನು ಕಣ್ತುಂಬಿಕೊಳ್ಳಲು ರಾಜ್ಯವಲ್ಲದೇ ಬೇರೆ ರಾಜ್ಯ ಮತ್ತು ದೇಶಗಳಿಂದಲೂ ಬರುತ್ತಿದ್ದಾರೆ.

ಜೋಗ ಭೇಟಿ ಸಮಯ ಪರಿಷ್ಕರಣೆ, ಪ್ರವಾಸಿಗರ ಆಕ್ರೋಶಜೋಗ ಭೇಟಿ ಸಮಯ ಪರಿಷ್ಕರಣೆ, ಪ್ರವಾಸಿಗರ ಆಕ್ರೋಶ

ಮುಂಗಾರು ಮಳೆ ಭೋರ್ಗರೆದು ಸ್ವಲ್ಪ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವುದು ಮಾತ್ರವಲ್ಲ, ಪ್ರವಾಸಿಗರಿಗೂ ಜೋಗ ಜಲಪಾತ ವೀಕ್ಷಿಸಲು ಉತ್ತಮ ವಾತಾವರಣ ಕಲ್ಪಿಸಿಕೊಟ್ಟಿದೆ. ಮತ್ತೆ ಇಂಥ ವೈಭೋಗ ನೋಡಲು ಸಿಗುವುದೋ ಇಲ್ಲವೋ ಎಂದು ಪ್ರವಾಸಿಗರು ಜೋಗದತ್ತ ಪಯಣ ಬೆಳೆಸುತ್ತಿದ್ದಾರೆ. ಕಳೆದ ವರ್ಷ ಮುಂಗಾರು ದುರ್ಬಲವಾದ ಕಾರಣ ಜಲಪಾತಕ್ಕೆ ರಂಗೇರಿರಲಿಲ್ಲ.

Tourists are coming in highest numbers to see jog falls

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ಸಾಕಷ್ಟು ಮಳೆಯಾಗಿದ್ದು, ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದಾಳೆ. ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದೆ. ಈ ವರ್ಷ ಜುಲೈ ತಿಂಗಳ ಅಂತ್ಯದಲ್ಲಿ ಜಲಪಾತದ ವೈಭವ ಮತ್ತಷ್ಟು ಮರುಕಳಿಸುವ ಸಾದ್ಯತೆ ಇದೆ. ಕಳೆದ ಒಂದು ವಾರದಿಂದ ಸುಮಾರು 700-800 ಮಿಮಿ ಮಳೆಯಾದ ಕಾರಣ ಲಿಂಗನಮಕ್ಕಿ ಜಲಾನಯನ ಪ್ರದೇಶಗಳು ಮೈದುಂಬಿಕೊಂಡು ಭೋರ್ಗರೆಯುತ್ತಿದೆ.

Tourists are coming in highest numbers to see jog falls

ಅದರಂತೆ ಜೋಗ ಈಗ ನಯನ ಮನೋಹರ ದೃಶ್ಯಕ್ಕೆ ಸಾಕ್ಷಿಯಾಗಿದೆ. ಈ ನಯನ ಮನೋಹರ ದೃಶ್ಯ ನೋಡಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಸತತ ಮಳೆಯಿಂದಾಗಿ ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ, ಶಿರಸಿ, ಶಿವಮೊಗ್ಗ, ಗದಗ, ಬಾಗಲಕೋಟೆ ರಾಯಚೂರು ಮೊದಲಾದ ಭಾಗಗಳಿಂದ ಪ್ರವಾಸಿಗರು ದಂಡು ಹರಿದು ಬರುತ್ತಿದೆ. ಅಷ್ಟೇ ಅಲ್ಲ, ಸತತ ಮಳೆಯಿಂದಾಗಿ ಜೋಗದಲ್ಲಿ ಜಾರುವಿಕೆ ಹೆಚ್ಚಾಗಿದ್ದು, ಪ್ರವಾಸಿಗರು ಬಹಳ ಎಚ್ಚರಿಕೆಯಿಂದ ಓಡಾಡಬೇಕಿದೆ.

English summary
Tourists are coming in highest numbers to see jog falls. There is heavy rain all over the district of Shimoga, with rivers flowing over. Approximately 30,000 visitors visited Jog in a week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X