ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
 • search

ನೀನಾಸಮ್: ಒಂದು ವರ್ಷ ಡಿಪ್ಲೊಮಾ ಇನ್‌ ಆರ್ಟ್ಸ್‌ ಶಿಕ್ಷಣಕ್ಕೆ ಅರ್ಜಿ ಆಹ್ವಾನ

By Nayana
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಸಾಗರ, ಮೇ 14: ನೀನಾಸಮ್ ರಂಗಶಿಕ್ಷಣ ಕೇಂದ್ರವು 2018-19ನೇ ಸಾಲಿನ ಡಿಪ್ಲೊಮಾ ಇನ್ ಆರ್ಟ್ಸ್ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಇರಬೇಕು.

  ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ಇದ್ದು ಹದಿನೈದು ಮಂದಿಗೆ ವಿದ್ಯಾರ್ಥಿವೇತನ ದೊರೆಯುತ್ತದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ.

  ನೀನಾಸಂ ರಂಗ ತರಬೇತಿ ಡಿಪ್ಲೋಮಾಗೆ ಅರ್ಜಿ ಹಾಕುವುದು ಹೇಗೆ?

  ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆಯಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ.

  Want to join Diploma in Theater Arts? Just click here!

  ಪ್ರಾಸ್ಪೆಕ್ಟಸ್, ಶುಲ್ಕದ ವಿವರ ಮತ್ತು ಪ್ರವೇಶ ಪತ್ರಗಳನ್ನು www.ninasam.org ನಿಂದ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ನಮ್ಮ ಕಛೇರಿಗೆ ಬರೆದು ಅಂಚೆಯಲ್ಲಿ ತರಿಸಿಕೊಳ್ಳಬಹುದು. ಪ್ರವೇಶ ಪತ್ರವನ್ನು ಭರ್ತಿಮಾಡಿ ಜೂನ್ 16ರ ಒಳಗಾಗಿ ಶ ಕಳುಹಿಸಬೇಕು.

  ವಿಳಾಸ: ನೀನಾಸಮ್ ರಂಗಶಿಕ್ಷಣ ಕೇಂದ್ರ, ಹೆಗ್ಗೋಡು, ಸಾಗರ, ಶಿವಮೊಗ್ಗ 577 417 ಈ ವಿಳಾಸಕ್ಕೆ ತಲುಪುವಂತೆ ಕಳಿಸಬೇಕು. ದಿನಾಂಕ 23 ಮತ್ತು 24 ಜೂನ್ 2018 ಶನಿವಾರ ಬೆಳಿಗ್ಗೆಯಿಂದ ಭಾನುವಾರದವರೆಗೆ (ಮತ್ತು ಅಗತ್ಯವಿದ್ದರೆ 25ರಂದು ಕೂಡ) ಆಯ್ಕೆಯ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ವೆಚ್ಚದಲ್ಲೇ ಹೆಗ್ಗೋಡಿಗೆ ಬಂದು ಹಾಜರಿರಬೇಕು.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Ninasam theater education center in Heggodu, has called applications from interested artists for diploma in theater arts course.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more