ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭದ್ರಕೋಟೆ ಶಿಕಾರಿಪುರದಲ್ಲಿ ಈ ಬಾರಿಯೂ ಯಡಿಯೂರಪ್ಪ ಗೆಲುವು ಸುಲಭ

|
Google Oneindia Kannada News

Recommended Video

ಶಿವಮೊಗ್ಗದ ಶಿಕಾರಿಪುರದಲ್ಲಿ ಬಿ ಎಸ್ ಯಡಿಯೂರಪ್ಪನವರ ಗೆಲುವು ಸುಲಭ | ಹೇಗೆ? | Oneindia Kannada

ಶಿವಮೊಗ್ಗ, ಏಪ್ರಿಲ್ 20 : ಶಿಕಾರಿಪುರ ಬಿ.ಎಸ್.ಯಡಿಯೂರಪ್ಪ ಅವರ ಭದ್ರಕೋಟೆ. ಹಲವು ಬಾರಿ ಇದು ಸಾಬೀತಾಗಿದೆ. ಈ ಬಾರಿಯ ಚುನಾವಣೆಯಲ್ಲಿಯೂ ಈ ಚಿತ್ರಣ ಬದಲಾವಣೆ ಆಗುವುದಿಲ್ಲ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಈ ಚುನಾವಣೆಯಲ್ಲಿಯೂ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ ಎಂಬುದು ಲೆಕ್ಕಾಚಾರ.

ಶಿಕಾರಿಪುರ ಕ್ಷೇತ್ರಕ್ಕೆ ಜಿ.ಬಿ.ಮಾಲತೇಶ್ ಅವರು ಕಾಂಗ್ರೆಸ್ ಅಭ್ಯರ್ಥಿ. ಅಭ್ಯರ್ಥಿ ಘೋಷಣೆಯಾದ ಬಳಿಕ ಸ್ವತಃ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಅಚ್ಚರಿಗೊಂಡಿದ್ದಾರೆ. ಯಡಿಯೂರಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡಬಲ್ಲ ಅಭ್ಯರ್ಥಿಯಲ್ಲ ಎಂಬುದು ಇದಕ್ಕೆ ಕಾರಣ.

ಅಭ್ಯರ್ಥಿಗಳು ಅಂತಿಮ : ಶಿಕಾರಿಪುರದ ಚುನಾವಣಾ ಕಣದ ಚಿತ್ರಣಅಭ್ಯರ್ಥಿಗಳು ಅಂತಿಮ : ಶಿಕಾರಿಪುರದ ಚುನಾವಣಾ ಕಣದ ಚಿತ್ರಣ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಜಿ.ಬಿ.ಮಾಲತೇಶ್ ಅವರು ಪುರಸಭೆಯ ಸದಸ್ಯರು. ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಬಳಿಕ ಬಿಜೆಪಿ ನಾಯಕರು ಸಹ ನಿರಾಳರಾಗಿದ್ದಾರೆ. ಯಡಿಯೂರಪ್ಪ ಅವರು ಎಷ್ಟು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂಬ ಲೆಕ್ಕಾಚಾರ ಆರಂಭವಾಗಿದೆ.

Flashback : ಶಿಕಾರಿಪುರದಲ್ಲಿ ಯಡಿಯೂರಪ್ಪ ಒಮ್ಮೆ ಸೋಲು ಕಂಡಿದ್ದಾರೆ!Flashback : ಶಿಕಾರಿಪುರದಲ್ಲಿ ಯಡಿಯೂರಪ್ಪ ಒಮ್ಮೆ ಸೋಲು ಕಂಡಿದ್ದಾರೆ!

ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್‌ನಿಂದ ಜಿ.ಬಿ.ಮಾಲತೇಶ್ ಮತ್ತು ಜೆಡಿಎಸ್‌ನಿಂದ ಎಚ್.ಟಿ.ಬಳಿಗಾರ್ ಅವರು ಅಭ್ಯರ್ಥಿ. ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಯಡಿಯೂರಪ್ಪ ಗೆಲುವನ್ನು ಮತ್ತಷ್ಟು ಸುಲಭವಾಗಿಸಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ

ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ

ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರವನ್ನು ಸಾಕಷ್ಟು ಅಭಿವೃದ್ದಿಪಡಿಸಿದ್ದಾರೆ. ಚುನಾವಣೆಯಲ್ಲಿ ಇದು ಅವರ ಬೆನ್ನಿಗೆ ನಿಲ್ಲಲಿದೆ. 2008ರ ಚುನಾವಣೆ ಸಂದರ್ಭದಲ್ಲಿ ಶಿಕಾರಿಪುರಕ್ಕೆ ಒಂದು ಪಥದ ರಸ್ತೆ ಇತ್ತು. ಒಂದೇ ವರ್ಷದಲ್ಲಿ ಕ್ಷೇತ್ರದ ಚಿತ್ರಣ ಬದಲಾಗಿದೆ. ಈಗ ಉತ್ತಮವಾಗಿ ನಾಲ್ಕು ಪಥದ ರಸ್ತೆ ನಿರ್ಮಾಣವಾಗಿದೆ.

2013ರ ಚುನಾವಣೆ

2013ರ ಚುನಾವಣೆ

2013ರ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ ಯಡಿಯೂರಪ್ಪ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಹೊರಬಂದು ಕೆಜೆಪಿ ಪಕ್ಷ ಸ್ಥಾಪನೆ ಮಾಡಿ ಚುನಾವಣಾ ಕಣಕ್ಕಿಳಿದರು. ಜನರು ಅನುಕಂಪದ ಆಧಾರದ ಮೇಲೆ ಅವರಿಗೆ ಮತ ನೀಡಿದರು. ಬಹಳ ಸುಲಭವಾಗಿ ಅವರು ಶಿಕಾರಿಪುರ ಕ್ಷೇತ್ರದಲ್ಲಿ ಗೆದ್ದು ಬಂದಿದ್ದರು. ನಂತರ ಬದಲಾದ ರಾಜಕೀಯ ಚಿತ್ರಣದಲ್ಲಿ ಬಿಜೆಪಿಗೆ ವಾಪಸ್ ಆದರು. ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದರು.

ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

ಈ ಬಾರಿಯ ಚುನಾವಣೆಯಲ್ಲಿಯೂ ಯಡಿಯೂರಪ್ಪ ಅವರ ಗೆಲುವು ಸುಲಭ. 2018ರ ವಿಧಾನಸಭೆ ಚುನಾವಣೆಗೆ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ. ಆದ್ದರಿಂದ, ಜನರು ಸಹಜವಾಗಿಯೇ ಬೆಂಬಲ ನೀಡಲಿದ್ದಾರೆ.

ಮತ್ತೊಂದು ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಬಲವಾದ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಆದ್ದರಿಂದ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರಿಗೆ ವಿರೋಧಿಗಳಿಲ್ಲ. ಜಿ.ಬಿ.ಮಾಲತೇಶ್ ಅವರು ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ಕಾರ್ಯದಿಂದ ದೂರವುಳಿದಿದ್ದಾರೆ.

ಯಡಿಯೂರಪ್ಪ ವಿರುದ್ಧ ಅಭ್ಯರ್ಥಿ

ಯಡಿಯೂರಪ್ಪ ವಿರುದ್ಧ ಅಭ್ಯರ್ಥಿ

ಶಿಕಾರಿಪುರದ ಕಾಂಗ್ರೆಸ್ ನಾಯಕರು ಮಹಾಲಿಂಗಪ್ಪ ಅವರು ಅಭ್ಯರ್ಥಿಯಾಗಬಹುದು ಎಂದು ನಿರೀಕ್ಷಿಸಿತ್ತು. 1999ರಲ್ಲಿ ಅವರು ಯಡಿಯೂರಪ್ಪ ಅವರನ್ನು ಸೋಲಿಸಿದ್ದರು.

ನಗರದ ಮಹದೇವಪ್ಪ, ಶಾಂತವೀರಪ್ಪ ಗೌಡ ಅವರನ್ನು ಅಭ್ಯರ್ಥಿಯಾಗಿ ಮಾಡಬಹುದು ಎಂಬ ಲೆಕ್ಕಾಚಾರವಿತ್ತು. ಆದರೆ, ಆ ಇಬ್ಬರು ಬಿಜೆಪಿಗೆ ಮರಳಿದ್ದಾರೆ.

English summary
Shikaripur has over the years become a B S Yeddyurappa bastion. This year too the equations are unlikely to change and the BJP's chief ministerial candidate appears to be in with a very good chance. The Congress picked G B Malatesh, a block Congress president and municipality member. Congress took a lot of its followers by surprise when it announced a weak candidate for Shikaripur in Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X