ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಈಗ ಎಲ್ಲಿದ್ದಾರೆ?

|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 13: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಹಾಕದೇ ಇರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಈವರೆಗೂ ಜೆಡಿಎಸ್ ಮಾಜಿ ಶಾಸಕ ಮಧುಬಂಗಾರಪ್ಪ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿತ್ತು. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಶಿವಮೊಗ್ಗ ಕ್ಷೇತ್ರದಲ್ಲಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪಟ್ಟುಹಿಡಿದಿತ್ತು.

ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಿಗೆ ಜಾರಕಿಹೊಳಿ-ಡಿಕೆಶಿ ಕಾರಣ? ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಿಗೆ ಜಾರಕಿಹೊಳಿ-ಡಿಕೆಶಿ ಕಾರಣ?

ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ಕಾಗೋಡು ತಿಮ್ಮಪಪ್, ಕಾಂಗ್ರೆಸ್ ಮುಖಂಡ ಮಂಜುನಾಥ್ ಭಂಡಾರಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಕೊನೆಯ ಘಳಿಗೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರಲು ನಿರ್ಧರಿಸಿದೆ.

ಕಾಗೋಡು ತಿಮ್ಮಪ್ಪ, ಕಿಮ್ಮನೆ ಸ್ಪರ್ಧಿಸುತ್ತಿಲ್ಲ

ಕಾಗೋಡು ತಿಮ್ಮಪ್ಪ, ಕಿಮ್ಮನೆ ಸ್ಪರ್ಧಿಸುತ್ತಿಲ್ಲ

ಕಿಮ್ಮನೆ ರತ್ನಾಕರ ಹಾಗೂ ಕಾಗೋಡು ತಿಮ್ಮಪ್ಪ ಇಬ್ಬರು ಸ್ಪರ್ಧಿಸದಿರಲು ನಿರ್ಧರಿಸಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳೀಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸ್ಪರ್ಧೆ ಮತ್ತೆ ಜೆಡಿಎಸ್ ಅಂಗಳಕ್ಕೆ ಬಂದಿದ್ದು ಜೆಡಿಎಸ್ ನಿದಂದ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಸಂಪುಟ ವಿಸ್ತರಣೆ ವಿಳಂಬ:ಉಪಚುನಾವಣೆಯಲ್ಲಿ 'ಕೈ' ಕೊಡಲಿದ್ದಾರಾ ಶಾಸಕರು ಸಂಪುಟ ವಿಸ್ತರಣೆ ವಿಳಂಬ:ಉಪಚುನಾವಣೆಯಲ್ಲಿ 'ಕೈ' ಕೊಡಲಿದ್ದಾರಾ ಶಾಸಕರು

ಮಧುಬಂಗಾರಪ್ಪ ಫ್ರಾನ್ಸ್ ನಲ್ಲಿದ್ದಾರೆ

ಮಧುಬಂಗಾರಪ್ಪ ಫ್ರಾನ್ಸ್ ನಲ್ಲಿದ್ದಾರೆ

ಮೂಲಗಳ ಪ್ರಕಾರ ಜೆಡಿಎಸ್ ಅಭ್ಯರ್ಥಿಯಾಗಲಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಕುಟುಂಬ ಸಮೇತ ಫ್ರಾನ್ಸ್ ಪ್ರವಾಸಕ್ಕೆ ತೆರಳಿದ್ದಾರೆ.

ಪ್ರವಾಸ ಮುಗಿಸಿ ಅಕ್ಟೋಬರ್ 15ರಂದು ರಾತ್ರಿ ವೇಳೆಗೆ ಮಧು ಬಂಗಾರಪ್ಪ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಆದರೆ ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಮಧು ಪ್ರವಾಸ ಮೊಟಕುಗೊಳಿಸಿ ಒಂದು ದಿನ ಮುಂಚಿತವಾಗಿಯೇ ವಾಪಸಾಗಲಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ ಮಾತ್ರ ಜೆಡಿಎಸ್ ನಿಂದ ಮಧು ಕಣಕ್ಕಿಳಿಯಲಿದ್ದಾರೆ.

ಬಳ್ಳಾರಿ ಲೋಕಸಭಾ ಉಪಚುನಾವಣೆ ಉಸ್ತುವಾರಿ ಡಿಕೆಶಿ ಹೆಗಲಿಗೆ ಬಳ್ಳಾರಿ ಲೋಕಸಭಾ ಉಪಚುನಾವಣೆ ಉಸ್ತುವಾರಿ ಡಿಕೆಶಿ ಹೆಗಲಿಗೆ

ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿ ಇಲ್ಲ

ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿ ಇಲ್ಲ

ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್​ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್​ ಮತ್ತು ಸುಂದರೇಶ್​ ಸ್ಪರ್ಧಿಸಲು ಒಲವು ತೋರಿರಲಿಲ್ಲ. ಹಾಗಾಗಿ ಶಿವಮೊಗ್ಗವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಶನಿವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ?

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ?

ಪಕ್ಷದ ಮೂಲಗಳ ಪ್ರಕಾರ ಮಧು ಬರುವುದು ವಿಳಂಬವಾದರೆ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸುವರು ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಗೀತಾ ಅವರು ಸ್ಪರ್ಧಿಸುವ ಕುರಿತಂತೆ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬುದು ತೂಗುಯ್ಯಾಲೆಯಲ್ಲಿದೆ. ಒಂದು ವೇಳೆ ಮಧು ಮತ್ತು ಗೀತಾ ಶಿವರಾಜ್ ಕುಮಾರ್ ಇಬ್ಬರೂ ಭಾಗವಹಿಸದಿದ್ದರೆ ಮೂರನೇ ಅಭ್ಯರ್ಥಿಯನ್ನು ಕೊನೇ ಕ್ಷಣದಲ್ಲಿ ಜೆಡಿಎಸ್ ಕಣಕ್ಕಿಳಿಸಬೇಕಾಗುತ್ತದೆ.

ಈ ಎಲ್ಲಾ ಕಾರಣಗಳಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ಅವರ ವಿರುದ್ಧ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವುದು ಇಲ್ಲಿಯವರೆಗೂ ನಿಗೂಢವಾಗಿಯೇ ಉಳಿದಿದೆ.

English summary
Former MLA of JDS Madhu Bangarappa will be returned from France by Monday who was on family trip since JDS to put him as candidate in Shimoga parliamentary by election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X