ಶಿಕಾರಿಪುರದಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಯಡಿಯೂರಪ್ಪ

Posted By: Gururaj
Subscribe to Oneindia Kannada

ಶಿವಮೊಗ್ಗ, ನವೆಂಬರ್ 13 : 'ಶಿಕಾರಿಪುರದಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನಾನು ಕ್ಷೇತ್ರ ಬದಲಾವಣೆ ಮಾಡುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ' ಎಂದು ಬಿ.ವೈ.ರಾಘವೇಂದ್ರ ಹೇಳಿದರು.

ಸೋಮವಾರ ಶಿವಮೊಗ್ಗದಲ್ಲಿ ಮಾತನಾಡಿದ ಅವರು, 'ತಮಗೆ ರಾಜಕೀಯ ಮರು ಜನ್ಮ ನೀಡಿದ ಶಿಕಾರಿಪುರಿಂದ ಸ್ಪರ್ಧಿಸುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ' ಎಂದರು.

ರಾಣೆಬೆನ್ನೂರಿನಿಂದ ಸ್ಪರ್ಧಿಸಲಿದ್ದಾರೆ ಬಿಎಸ್‌ವೈ ಪುತ್ರ ಬಿ.ವೈ.ರಾಘವೇಂದ್ರ?

Yeddyurappa will contest form Shikaripura says BY Raghavendra

'ಯಡಿಯೂರಪ್ಪ ಅವರು ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಯಡಿಯೂರಪ್ಪ ಅವರ ಪರವಾಗಿ ಕೆಲಸ ಮಾಡುತ್ತೇನೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತೇನೆ' ಎಂದು ಯಡಿಯೂರಪ್ಪ ಪುತ್ರ ಮತ್ತು ಶಿಕಾರಿಪುರ ಶಾಸಕ ಬಿ.ವೈ.ರಾಘವೇಂದ್ರ ಹೇಳಿದರು.

ಉತ್ತರ ಕರ್ನಾಟಕದಿಂದ ಬಿಎಸ್‌ವೈ ಸ್ಪರ್ಧೆ, ಓದುಗರ ಅಭಿಮತ

ರಾಣೆಬೆನ್ನೂರಿನಿಂದ ಸ್ಪರ್ಧೆ? : ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧಿಸಿದರೆ ಬಿ.ವೈ.ರಾಘವೇಂದ್ರ ಅವರು ರಾಣೆಬೆನ್ನೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆದರೆ, ರಾಘವೇಂದ್ರ ಅವರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಶಿಕಾರಿಪುರ ಕ್ಷೇತ್ರದ ಪಕ್ಕದಲ್ಲಿದೆ. ಯಡಿಯೂರಪ್ಪ ಅವರ ಪ್ರಭಾವ ಇಲ್ಲಿಯೂ ಕೆಲಸ ಮಾಡಲಿದ್ದು, ಲಿಂಗಾಯತ ಸುಮುದಾಯದ ಮತಗಳು ಇಲ್ಲಿ ನಿರ್ಣಾಯಕವಾಗಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BS Yeddyurappa will contest for 2018 Karnataka assembly elections from Shikaripura said, Shikaripura MLA and Yeddyurappa son B.Y.Raghavendra.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ