ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ

|
Google Oneindia Kannada News

ಶಿವಮೊಗ್ಗ, ಜುಲೈ 4: ಕೊರೊನಾ ಸೋಂಕು ನಿಯಂತ್ರಣ ಮಾಡುವ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಆದೇಶ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಯಲಿದೆ. ಕೆ.ಎಸ್.ಈಶ್ವರಪ್ಪ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳ್ಳಸಿ ಎಂದು ಆದೇಶ ಮಾಡಿದ್ದಾರೆ.

ಲಾಕ್‌ಡೌನ್ ಅಗತ್ಯವಿಲ್ಲ ಆದರೆ?: ಸಚಿವ ಈಶ್ವರಪ್ಪ ಮಾತುಲಾಕ್‌ಡೌನ್ ಅಗತ್ಯವಿಲ್ಲ ಆದರೆ?: ಸಚಿವ ಈಶ್ವರಪ್ಪ ಮಾತು

ಜಿಲ್ಲಾಧಿಕಾರಿಗಳ ಸಭಾಂಗರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿಗೆ ಆದೇಶ ಮಾಡಿದ್ದಾರೆ. ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನರನ್ನ ಎಚ್ಚರಿಕೆಗೊಳಿಸುವ ದೃಷ್ಠಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

1 Week Curfew Ordered In Shivamogga From Today

10 ರಿಂದ 6 ಗಂಟೆಯ ವೇಳೆಯಲ್ಲಿ ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅವರ ವಿರುದ್ಧ 200 ರೂಪಾಯಿ ದಂಡ ವಿಧಿಸಿ. ಒಂದು ವೇಳೆ ಈ ಅವಧಿಯಲ್ಲೂ ಕೊರೊನಾ ನಿಯಂತ್ರಣಗೊಳ್ಳದಿದ್ದರೆ ಮತ್ತೆ ಸಭೆಯನ್ನ ಕರೆಯದೆ, ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ನಗರದಲ್ಲಿ ಓಡಾಡುವ ಶೇ.95 ರಷ್ಟು ಜನರು ಮಾಸ್ಕ್ ಧರಿಸುತ್ತಿದ್ದಾರೆ. ಆದರೆ, ಗುಂಪು ಸೇರುವುದು, ಸಾಮಾಜಿಕ ಅಂತರ ಪಾಲಿಸದೇ ಇರುವದು ಕಂಡು ಬರುತ್ತಿದೆ. ಹೀಗೆ ಮಾಡಿದರೆ, ಕೊರೊನಾ ಇನ್ನಷ್ಟು ಹೆಚ್ಚಾಗುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಈಶ್ವರಪ್ಪ ಕೊರೊನಾ ಕಟ್ಟಿ ಹಾಕಲು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

English summary
1 week curfew ordered in Shivamogga from today says minister KS Eshwarappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X