ಬಜೆಟ್; ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗಕ್ಕೆ 100 ಕೋಟಿ

ಶಿವಮೊಗ್ಗ, ಫೆಬ್ರವರಿ 5; ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೈಲ್ವೆ ಇಲಾಖೆಗೆ ನಿಗದಿ ಮಾಡಿರುವ ಅನುದಾನದ ವಿವರಗಳಿರುವ ಪಿಂಕ್ ಬುಕ್ ಅನ್ನು ಇಲಾಖೆ ಬಿಡುಗಡೆ ಮಾಡಿದೆ. ಉತ್ತರ ಕರ್ನಾಟಕ ಮತ್ತು ಮಲೆನಾಡು ಸಂಪರ್ಕಿಸುವ ರೈಲು ಮಾರ್ಗ ಯೋಜನೆಗೆ 100 ಕೋಟಿ ಅನುದಾನ ಸಿಕ್ಕಿದೆ.

" ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಬಜೆಟ್‌ನಲ್ಲಿ 100 ಕೋಟಿ ರೂ. ಗಳನ್ನು ಕಾಯ್ದಿರಿಸಲಾಗಿದೆ" ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.

ಈ ರೈಲು ಯೋಜನೆ ಜನರ ಬಹುದಿನಗಳ ಕನಸಾಗಿದೆ. ರೈಲು ಮಾರ್ಗದ ನಿರ್ಮಾಣ ಕಾರ್ಯಕ್ಕೆ ಅಗತ್ಯವಾಗಿರುವ ಭೂಮಿಯನ್ನು ಕೆಐಎಡಿಬಿ ಸಂಸ್ಥೆಯ ಮೂಲಕ ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದೆ.

100 Crore For Shivamogga Shikaripura Ranebennur Railway Line

"ಈ ರೈಲು ಮಾರ್ಗದ ನಿರ್ಮಾಣ ಸಂಬಂಧ ಕೇಂದ್ರ ರೈಲ್ವೇ ಸಚಿವರೊಂದಿಗೆ ನಿರಂತರ ಸಂಪರ್ಕಿಸಿ, ಸಮಾಲೋಚನೆ ನಡೆಸಲಾಗಿತ್ತು. 2019-20ರ ಕೇಂದ್ರ ಮುಂಗಡ ಪತ್ರದಲ್ಲಿ ಶಿವಮೊಗ್ಗ ಭಾಗದಲ್ಲಿ ರೈಲು ಸಂಚಾರವನ್ನು ಹೆಚ್ಚಿಸಲು ಮೂಲ ಅಗತ್ಯವೆನಿಸಿರುವ ಕೋಚಿಂಗ್ ಡಿಪೋವನ್ನು ಶಿವಮೊಗ್ಗ ಸಮೀಪದ ಕೋಟೆಗಂಗೂರಿನಲ್ಲಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರಾಗಿದೆ" ಎಂದು ಹೇಳಿದ್ದಾರೆ.

ಈ ಯೋಜನೆಗೆ ಬೇಕಾಗಿರುವ ಹೆಚ್ಚುವರಿ ಭೂಮಿಯನ್ನು ಖಾಸಗಿಯವರಿಂದ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯೂ ಚಾಲ್ತಿಯಲಿದೆ. ರೈಲ್ವೆ ಇಲಾಖೆಯು ಆರಂಭಿಕ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ. ಅದಕ್ಕಾಗಿ ಮುಂಗಡ ಪತ್ರದಲ್ಲಿ 12 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

2008ರಲ್ಲಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಚರ್ಚೆ ಆರಂಭವಾಗಿತ್ತು. ಈಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವಾಗಲೇ ಯೋಜನೆಗೆ ಚಾಲಕೆ ಸಿಕ್ಕಿದೆ.

ಶಿವಮೊಗ್ಗ-ಶಿಕಾರಿಪುರ, ಶಿಕಾರಿಪುರ-ರಾಣೆಬೆನ್ನೂರು ಎಂದು ಎರಡು ವಿಭಾಗವಾಗಿ ಮಾಡಿ ಭೂಸ್ವಾಧೀನ ಮಾಡಲಾಗುತ್ತಿದೆ. ಸುಮಾರು 103 ಕಿ. ಮೀ. ಯೋಜನೆಗೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಹೆಚ್ಚಿನ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+