• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 120 ಕಿ.ಮೀ ಉದ್ದದ ಸೈಕಲ್ ಲೇನ್

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಸೆಪ್ಟೆಂಬರ್ 29: ಶಿವಮೊಗ್ಗ ನಗರದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟಾರೆಯಾಗಿ 120 ಕಿ.ಮೀ ಉದ್ದ ಪ್ರತ್ಯೇಕ ಸೈಕಲ್ ಲೇನ್ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು. ಪ್ರತ್ಯೇಕ ಸೈಕಲ್ ಲೇನ್ ನಿರ್ಮಾಣದಿಂದ ಸೈಕಲ್ ಸವಾರರಿಗೆ ಉತ್ತೇಜನ ದೊರೆಯಲಿದೆ ಎಂದು ತಿಳಿಸಿದರು.

ಮೋಟಾರು ರಹಿತ ಸಂಚಾರ

ಮೋಟಾರು ರಹಿತ ಸಂಚಾರ

ಇದೇ ರೀತಿ ಸ್ಮಾರ್ಟ್ ಸಿಟಿ ಯೋಜನೆಯಡಿ ಮೈಸೂರು ನಗರದಲ್ಲಿರುವ "ಟ್ರಿಣ್ ಟ್ರಿಣ್' ಮಾದರಿಯಲ್ಲಿ ಸಾರ್ವಜನಿಕ ಸೈಕಲ್ ಶೇರಿಂಗ್ ವ್ಯವಸ್ಥೆಯನ್ನು ಸಹ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆನ್ ಲೈನ್ ಅರ್ಜಿ ಆಹ್ವಾನಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆನ್ ಲೈನ್ ಅರ್ಜಿ ಆಹ್ವಾನ

ಗಾಂಧೀ ಜಯಂತಿ ಅಂಗವಾಗಿ ಮೋಟಾರು ರಹಿತ ಸಂಚಾರವನ್ನು ಉತ್ತೇಜಿಸಲು ಇನ್ನು ಮುಂದೆ ಪ್ರತಿ ಮೂರನೇ ಶನಿವಾರ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ತುರ್ತು ಸಂದರ್ಭ ಹೊರತುಪಡಿಸಿ ಮೋಟಾರು ವಾಹನ ಬಳಸದೇ ಇರಲು ನಿರ್ಧರಿಸಲಾಗಿದೆ.

ಶಿವಮೊಗ್ಗ ಸೈಕಲ್ ಕ್ಲಬ್ ಸಹಯೋಗದಲ್ಲಿ ಸೈಕ್ಲಥಾನ್

ಶಿವಮೊಗ್ಗ ಸೈಕಲ್ ಕ್ಲಬ್ ಸಹಯೋಗದಲ್ಲಿ ಸೈಕ್ಲಥಾನ್

ಸಾರ್ವಜನಿಕರಲ್ಲಿ ಪರಿಸರ ಮಾಲಿನ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 1 ರಂದು ನಗರದ ಗಾಂಧಿ ಉದ್ಯಾನದಿಂದ ವಿನೋಬಾ ನಗರದ ಫ್ರೀಡಂ ಪಾರ್ಕ್ ವರೆಗೆ ವಾಕಥಾನ್ ಮತ್ತು ಸೈಕ್ಲಥಾನ್ ಆಯೋಜಿಸಲಾಗಿದೆ. ಬೆಳಿಗ್ಗೆ 7.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ ಸೈಕಲ್ ಕ್ಲಬ್ ಸಹಯೋಗದಲ್ಲಿ ಸೈಕ್ಲಥಾನ್ ನಡೆಸಲಾಗುವುದು. ಆಸಕ್ತ ಸಾರ್ವಜನಿಕರು ಸಹ ಇದರಲ್ಲಿ ಭಾಗವಹಿಸುವಂತೆ ಆಯುಕ್ತರು ಮನವಿ ಮಾಡಿದರು.

ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ರಾಜ್ಯದಲ್ಲಿ ಮೂರನೇ ಸ್ಥಾನ

ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ರಾಜ್ಯದಲ್ಲಿ ಮೂರನೇ ಸ್ಥಾನ

ಲಾಕ್‍ಡೌನ್ ಬಳಿಕ ಕಾರ್ಮಿಕರ ಕೊರತೆಯಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಸ್ವಲ್ಪ ಹಿನ್ನಡೆ ಉಂಟಾಗಿತ್ತು. ಈಗ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಕರೆಯಿಸಿ ಕಾಮಗಾರಿಗಳಿಗೆ ಚುರುಕು ಮೂಡಿಸಲಾಗಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದ್ದು, ರಾಷ್ಟ್ರ ಮಟ್ಟದಲ್ಲಿ 21ನೇ ಸ್ಥಾನದಲ್ಲಿದೆ. ಇದುವರೆಗೆ ಸರ್ಕಾರದಿಂದ 307 ಕೋಟಿ ರೂ. ಬಿಡುಗಡೆಯಾಗಿದ್ದು, 157 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

ಟುಲಿಪ್ ಯೋಜನೆಯಡಿ ತರಬೇತಿ

ಟುಲಿಪ್ ಯೋಜನೆಯಡಿ ತರಬೇತಿ

ಅರ್ಬನ್ ಲರ್ನಿಂಗ್ ಇಂಟರ್ನ್ ಶಿಪ್ ಯೋಜನೆಯಡಿ ಇಂಜಿನಿಯರಿಂಗ್ ಹಿನ್ನೆಲೆಯ ಅಭ್ಯರ್ಥಿಗಳಿಗೆ ತಿಂಗಳಿಗೆ 5 ಸಾವಿರ ರೂ. ಸ್ಟೈಫಂಡ್ ನೀಡಲಾಗುತ್ತಿದೆ. ಒಟ್ಟು 50 ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅವಕಾಶವಿದ್ದು, ಇದೀಗ 6 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಯನ್ನು https://internship.aicte-india.org ಜಾಲತಾಣದಲ್ಲಿ ಪಡೆಯಬಹುದಾಗಿದೆ. ಆನ್‍ಲೈನ್ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕಡೆ ದಿನಾಂಕವಾಗಿದೆ ಎಂದು ಅವರು ಹೇಳಿದರು.

English summary
120 km long cycle lane has been started in the city of Shivamogga, According to Smart City Managing Director Chidananda Vatare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X