ಶಿವಮೊಗ್ಗದಲ್ಲಿ 16 ಲಕ್ಷ ಮತದಾರರು, ಏ.23ಕ್ಕೆ ಮತದಾನ

ಶಿವಮೊಗ್ಗ, ಏಪ್ರಿಲ್ 17 : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನದ ಕಣ ಅಂತಿಮಗೊಂಡಿದೆ. 16 ಲಕ್ಷ ಮತದಾರರು ಹಕ್ಕು ಚಲಾಯಿಸುವ ಅವಕಾಶ ಪಡೆದಿದ್ದಾರೆ. ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ.

ಈ ಪ್ರಣಾಳಿಕೆಗಳಲ್ಲಿ ಯಾವುದು ನಿಮ್ಮ ಗಮನ ಸೆಳೆದಿದೆ?

ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ದಯಾನಂದ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಎಪ್ರಿಲ್ 23ರಂದು ನಡೆಯಲಿರುವ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದು ಒಟ್ಟು 16,75,975 ಮತದಾರರು ತಮ್ಮ ಹಕ್ಕು ಚಲಾಯಿಸುವ ಅವಕಾಶ ಪಡೆದಿದ್ದಾರೆ' ಎಂದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಒಟ್ಟು 2021 ಮತಗಟ್ಟೆಗಳಿನ್ನು ಸ್ಥಾಪನೆ ಮಾಡಲಾಗುತ್ತದೆ. ಒಟ್ಟು ಮತದಾರರಲ್ಲಿ 8,31,185 ಪುರುಷರು ಹಾಗೂ 8,44,740 ಮಹಿಳಾ ಮತದಾರರು ಇದ್ದಾರೆ. ಇತರೆ ಮತದಾರರು 50.

16 lakh voters in Shimoga, Voting on April 23

ಜನವರಿ ಬಳಿಕ ಹೊಸದಾಗಿ 28550ಮತದಾರರು ತಮ್ಮ ಹೆಸರು ನೊಂದಾಯಿಸಿದ್ದಾರೆ. 2021 ಪ್ರಥಮ ಮತಗಟ್ಟೆ ಅಧಿಕಾರಿ ಹಾಗೂ 2021 ದ್ವಿತೀಯ ಮತಗಟ್ಟೆ ಅಧಿಕಾರಿ ಸೇರಿದಂತೆ ಒಟ್ಟು 4042 ಮತಗಟ್ಟೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ನಿಮ್ಮ ರಾಜಕೀಯ ಜ್ಞಾನವನ್ನು ಒರೆಗೆ ಹಚ್ಚುವ ರಸಪ್ರಶ್ನೆ

ಮತಗಟ್ಟೆಗಳಲ್ಲಿ ಕುಡಿಯುವ ನೀರು, ನೆರಳು, ಶೌಚಾಲಯ ಸೇರಿದಂತೆ ಕನಿಷ್ಟ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಈ ಬಾರಿ ಪ್ರತಿ ಮತಗಟ್ಟೆಗಳಲ್ಲಿ ಮತದಾರರಿಗೆ ಕನಿಷ್ಟ ಆರೋಗ್ಯ ಸೌಲಭ್ಯ ಒದಗಿಸಲು ಮೆಡಿಕಲ್ ಕಿಟ್ ಒದಗಿಸಲಾಗುತ್ತಿದೆ.

ಮತದಾನಕ್ಕಾಗಿ ಹಸುಗೂಸಿನೊಂದಿಗೆ ಮತಗಟ್ಟೆಗೆ ಆಗಮಿಸುವ ತಾಯಂದಿರಿಗೆ ಮಗುವನ್ನು ನೋಡಿಕೊಳ್ಳಲು ನೆರವಾಗುವಂತೆ ಪ್ರತಿ ಮತಗಟ್ಟೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ಮತದಾನ ಕೇಂದ್ರವಿರುವ ಕಟ್ಟಡಗಳ ಆವರಣದಲ್ಲಿ ಮತದಾರರ ಸಹಾಯಕ್ಕಾಗಿ ಸಹಾಯ ಕೇಂದ್ರವನ್ನು ತೆರೆಯಲಾಗುತ್ತದೆ.

ಸಖೀ ಮತಗಟ್ಟೆ : ಮಹಿಳೆಯರು ಮತದಾನದಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14 ಸಖೀ ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ 2 ಸಖೀ ಮತಗಟ್ಟೆಗಳನ್ನು ತೆರೆಯಲಾಗುತ್ತದೆ.

ಇದೇ ರೀತಿ ಬುಡಕಟ್ಟು ಜನರನ್ನು ಮತದಾನಕ್ಕೆ ಆಕರ್ಷಿಸಲು 3 ಬುಡಕಟ್ಟು ಮತದಾನ ಕೇಂದ್ರಗಳನ್ನು ಆರಂಭಿಸಲಾಗುವುದು. ಅಂಗವಿಕಲ ಚುನಾವಣಾ ಅಧಿಕಾರಿ/ಸಿಬ್ಬಂದಿಗಳನ್ನು ಒಳಗೊಂಡ 2 ಅಂಗವಿಕಲ ಮತದಾನ ಕೇಂದ್ರ ತೆರೆಯಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+