ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ವಿಮಾನ ನಿಲ್ದಾಣ; 164 ಕೋಟಿ ಹೆಚ್ಚುವರಿ ಅನುದಾನ

|
Google Oneindia Kannada News

ಶಿವಮೊಗ್ಗ, ನವೆಂಬರ್ 27 : ಶಿವಮೊಗ್ಗ ವಿಮಾನ ನಿಲ್ದಾಣದ ಯೋಜನಾ ವೆಚ್ಚ ಏರಿಕೆಯಾಗಿದೆ. 164 ಕೋಟಿ ಹೆಚ್ಚುವರಿ ವೆಚ್ಚವನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ಯೋಜನಾ ವೆಚ್ಚ 384 ಕೋಟಿಗೆ ಏರಿಕೆಯಾಗಿದೆ.

ಶುಕ್ರವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ. ಕಾನೂನು ಮತ್ತು ಸಂಸದೀಯ ಸಚಿವ ಜೆ. ಸಿ. ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಈಶ್ವರಪ್ಪ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಈಶ್ವರಪ್ಪ

ಕರ್ನಾಟಕ ಸರ್ಕಾರ ಈ ಹಿಂದೆ 220 ಕೋಟಿ ರೂ.ಗಳ ಅನುದಾನದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಆರಂಭಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ 164 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ನೀಡಲು ಅನುಮೋದನೆ ನೀಡಲಾಯಿತು.

ಶಿವಮೊಗ್ಗ ವಿಮಾನ ನಿಲ್ದಾಣ; ಯೋಜನೆಯ ಮುಖ್ಯಾಂಶಗಳುಶಿವಮೊಗ್ಗ ವಿಮಾನ ನಿಲ್ದಾಣ; ಯೋಜನೆಯ ಮುಖ್ಯಾಂಶಗಳು

 164 Crore Additional Cost For Airport Project

ಶಿವಮೊಗ್ಗ ವಿಮಾನ ನಿಲ್ದಾಣ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು. ನಗರದ ಹೊರವಲಯದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗಳು ನಡೆಯುತ್ತಿವೆ. ಒಟ್ಟು ಎರಡು ಹಂತದಲ್ಲಿ ಕಾಮಗಾರಿ ಕೈಗೊಳ್ಳಲಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಇದೆ.

ರಾಯಚೂರು ವಿಮಾನ ನಿಲ್ದಾಣದ ಕನಸಿಗೆ ಮರುಜೀವ ರಾಯಚೂರು ವಿಮಾನ ನಿಲ್ದಾಣದ ಕನಸಿಗೆ ಮರುಜೀವ

662.38 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. 1900 ಮೀಟರ್ ಉದ್ದದ ರನ್‌ ವೇ ನಿರ್ಮಾಣವಾಗಲಿದೆ. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಯೋಜನೆಗೆ ಒಪ್ಪಿಗೆ ನೀಡಿದ್ದರು. ಆದರೆ, ವಿವಿಧ ಕಾರಣದಿಂದಾಗಿ ಯೋಜನೆ ವಿಳಂಬವಾಗಿತ್ತು.

English summary
Karnataka government approved for 164 crore additional cost for Shivamogga airport project. Now project cost raised for 384 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X