ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುವೈತ್ ದೇಶದಿಂದ ಶಿವಮೊಗ್ಗಕ್ಕೆ ಬಂತು ಆಕ್ಸಿಜನ್ ಕಂಟೈನರ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.

ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್‌ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹ

ಖಾಸಗಿ ಸಂಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹ

ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್‌ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, ""ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್‌ನಿಂದ ಬಂದ ಆಕ್ಸಿಜನ್‌ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.

ಆಕ್ಸಿಜನ್ ಬಳಕೆ ಹೇಗೆ?

ಆಕ್ಸಿಜನ್ ಬಳಕೆ ಹೇಗೆ?

ವಿಐಎಸ್ಎಲ್ ಕಾರ್ಖಾನೆ ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ಇದು ಸದ್ಯ ಜಿಲ್ಲೆಗೆ ಸಾಕಾಗುತ್ತಿದೆ. ಈಗ ಕುವೈತ್‌ನಿಂದ ಆಕ್ಸಿಜನ್ ಬಂದಿರುವುದು ಹೆಚ್ಚುವರಿಯಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ ತಿಳಿಸಿದರು.

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್

ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್‌ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್‌ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.

ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.

ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ

ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ

ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.

English summary
20 tonnes of oxygen is supplied to Shivamogga from Kuwait to manage the Covid-19 situation. Oxygen tankers stored in a private company in Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X