ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking news; ಭದ್ರಾವತಿಗೆ ಜೆಡಿಎಸ್ ಅಭ್ಯರ್ಥಿ ಘೋಷಿಸಿದ ಕುಮಾರಣ್ಣ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 21; 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಮಾಜಿ ಶಾಸಕ ಅಪ್ಪಾಜಿಗೌಡರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದರು.

ಮಂಗಳವಾರ ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶಕ್ತಿಧಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ, "ಅಪ್ಪಾಜಿಗೌಡ ಅವರ ಬೆಂಬಲಿಗರು, ಭದ್ರಾವತಿ ಕ್ಷೇತ್ರದ ಜನರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಹಾಗಾಗಿ ಶಾರದಾ ಅಪ್ಪಾಜಿಗೌಡ ಅವರನ್ನು ಮುಂದಿನ ಅಭ್ಯರ್ಥಿಯಾಗಿ ಮಾಡುತ್ತೇನೆ" ಎಂದರು.

 ಭದ್ರಾವತಿ ನಗರಸಭೆ ಉಪ ಚುನಾವಣೆ: ಜೆಡಿಎಸ್‌ಗೆ ಭರ್ಜರಿ ಗೆಲುವು ಭದ್ರಾವತಿ ನಗರಸಭೆ ಉಪ ಚುನಾವಣೆ: ಜೆಡಿಎಸ್‌ಗೆ ಭರ್ಜರಿ ಗೆಲುವು

"ಮೊದಲ ಹಂತದಲ್ಲಿ 140 ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕಾರ್ಯಾಗಾರ ಮಾಡುತ್ತಿದ್ದೇವೆ. ಸೆಪ್ಟಂಬರ್ 27ರಂದು ಕಾರ್ಯಾಗಾರ ನಡೆಯಲಿದೆ. ಅಲ್ಲಿ ಮತ್ತಷ್ಟು ವಿಚಾರಗಳನ್ನು ಚರ್ಚೆ ಮಾಡಲಿದ್ದೇವೆ" ಎಂದು ಕುಮಾರಸ್ವಾಮಿ ತಿಳಿಸಿದರು.

ಭದ್ರಾವತಿ ಗಲಭೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಭದ್ರಾವತಿ ಗಲಭೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

Karnataka Assembly Polls 2023: HD Kumaraswamy Announced JDS Candidate For Bhadravathi

ಅಪ್ಪಾಜಿಗೌಡ ಪುಣ್ಯಸ್ಮರಣೆ; ಮಾಜಿ ಶಾಸಕ ಅಪ್ಪಾಜಿಗೌಡ ಸಮಾಧಿ ಸ್ಥಳದಲ್ಲಿ, ಅವರ ಪುತ್ಥಳಿಯನ್ನು ಮಂಗಳವಾರ ಅನಾವರಣ ಮಾಡಲಾಯಿತು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದಲ್ಲಿರುವ ಶಕ್ತಿಧಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಇಂದು ಅದನ್ನು ಅನಾವರಣ ಮಾಡಿ, ಪ್ರಥಮ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು.

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೋವಿಡ್‌ಗೆ ಬಲಿಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೋವಿಡ್‌ಗೆ ಬಲಿ

ಹೇಗಿದೆ ಅಪ್ಪಾಜಿಗೌಡರ ಪ್ರತಿಮೆ?; ಅಮೃತ ಶಿಲೆಯಲ್ಲಿ ಅಪ್ಪಾಜಿಗೌಡ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಯು ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ಅಗಲವಿದೆ. ಅಪ್ಪಾಜಿಗೌಡ ಕುರ್ಚಿಯೊಂದರ ಮೇಲೆ ಕುಳಿತ ರೀತಿಯಲ್ಲಿ ಈ ಪುತ್ಥಳಿಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಗೆ ನೆರಳು ನೀಡಲು ವಜ್ರಾಕೃತಿಯ ಮಂಟಪವನ್ನು ನಿರ್ಮಿಸಲಾಗಿದೆ.

https://embed.kooapp.com/embedKoo?kooId=13130e3e-d6cd-4a84-8c66-79086c1c2a9b

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಪ್ಪಾಜಿಗೌಡ ಪ್ರತಿಮೆ ಅನಾವರಣ ಮಾಡಿದರು. ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ, ಬಸವಕೇಂದ್ರದ ಶ್ರೀ ಡಾ.ಬಸವ ಮರಳಸಿದ್ಧ ಸ್ವಾಮೀಜಿ, ಕನಕಪೀಠದ ಶ್ರೀ ಈಶ್ವರಾನಂದ ಸ್ವಾಮೀಜಿ, ಮಾಜಿ ಶಾಸಕ ವೈ. ಎಸ್. ವಿ. ದತ್ತ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಜೆಡಿಎಸ್ ತಾಲೂಕು ಅಧ್ಯಕ್ಷ ಕರುಣಾಮೂರ್ತಿ, ಶಾರದಾ ಅಪ್ಪಾಜಿಗೌಡ, ಅಜಿತ್ ಗೌಡ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಕೋವಿಡ್ ಸೋಂಕು ತಗುಲಿದ್ದ ಭದ್ರಾವತಿ ಕ್ಷೇತ್ರ ಮಾಜಿ ಶಾಸಕ, ಜೆಡಿಎಸ್ ನಾಯಕ ಎಂ. ಜೆ. ಅಪ್ಪಾಜಿ ಗೌಡ ಸೆಪ್ಟೆಂಬರ್ 3ರಂದು ಮೃತಪಟ್ಟಿದ್ದರು. 2013ರ ಚುನಾವಣೆಯಲ್ಲಿ ಎಂ. ಜೆ. ಅಪ್ಪಾಜಿ ಗೌಡರು 78,370 ಮತಗಳನ್ನು ಪಡೆದು ಕ್ಷೇತ್ರದಲ್ಲಿ ಜಯಗಳಿಸಿದ್ದರು. 2018ರಲ್ಲಿ ಸೋಲು ಕಂಡಿದ್ದರು.

English summary
Former chief minister H. D. Kumaraswamy announced party candidate for the Bhadravathi assembly seat for the 2023 assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X