ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ 21 ಮಂದಿಗೆ ಮಂಗನ ಕಾಯಿಲೆ ಚಿಕಿತ್ಸೆ

|
Google Oneindia Kannada News

ಶಿವಮೊಗ್ಗ, ಜನವರಿ 26: ಶಿವಮೊಗ್ಗದಲ್ಲಿ 21 ಮಂದಿಗೆ ಮಂಗನ ಕಾಯಿಲೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ 121 ಜನರು ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯಲು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ನಾಲ್ವರಿಗೆ ಜ್ವರ ಮರುಕಳಿಸಿದ್ದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. 49 ಜನರಿಗೆ ಕೆಎಫ್‌ಡಿ ಸೋಂಕಿರುವುದು ಹಾಗೂ 73 ಜನರಿಗೆ ಕೆಎಫ್‌ಡಿ ಸೋಂಕಿಲ್ಲದಿರುವುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ಮೂವರ ವರದಿ ಬರಲು ಬಾಕಿ ಇದೆ. 102 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 21 ಜನರಿಗೆ ಇನ್ನೂ ಚಿಕಿತ್ಸೆ ಮುಂದುವರೆದಿದೆ. ಇವರಲ್ಲಿ ಮೂವರು ಮರು ದಾಖಲಾದವರು ಎಂದು ಆಸ್ಪತ್ರೆ ತಿಳಿಸಿದೆ.

21 people admitted for KFD treatment in Shivamogga

ಮೈಸೂರು ಜಿಲ್ಲೆಯಲ್ಲೂ ಮಂಗನ ಕಾಯಿಲೆಯ ಭೀತಿ:ಆತಂಕಗೊಂಡ ಜನಮೈಸೂರು ಜಿಲ್ಲೆಯಲ್ಲೂ ಮಂಗನ ಕಾಯಿಲೆಯ ಭೀತಿ:ಆತಂಕಗೊಂಡ ಜನ

ಉಡುಪಿಯಲ್ಲಿ ಸತ್ತ ಮಂಗಗಳ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಅಜೆಕಾರು, ಹೆರ್ಮುಂಡೆ, ಶಿರಿಯಾರ, ಶಂಕರನಾರಾಯಣದಲ್ಲಿ ಸತ್ತಮಂಗಗಳ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಮೇಶ್ ಅವರಿಗೆ ಮಂಗನ ಕಾಯಿಲೆ ಸೋಂಕು ತಗುಲಿದ್ದು ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
Nearly 21 people admitted for monkey fever in Manipal hospital . Most of them from Shivamogga and Uttarakannada districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X