ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ 22 ಸಾವಿರ ಎಲ್‍ಇಡಿ ದೀಪ ಅಳವಡಿಕೆ: ಬೈರತಿ ಬಸವರಾಜು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 02: ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮಕೈಗೊಳ್ಳಲಾಗಿದ್ದು, ನಿಗದಿತ ಅವಧಿಯ ಒಳಗಾಗಿ ಗುಣಮಟ್ಟದ ಕಾಮಗಾರಿಯನ್ನು ನಡೆಸಲು ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ತಿಳಿಸಿದರು.

Recommended Video

ವಿರಾಟ್ ತಮ್ಮ ನಾಯಕತ್ವದ ಬೆಳವಣಿಗೆಗೆ ಕಾರಣ ಯಾರು ಅಂತಾ ಹೇಳಿದ್ದಾರೆ ನೋಡಿ | Virat Kohli | Oneindia Kannada

ಮಂಗಳವಾರ ಸ್ಮಾರ್ಟ್ ಸಿಟಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ‌ ಅವರು, ಶಿವಮೊಗ್ಗ ಮಾದರಿ ನಗರವಾಗಿ ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿರುವ ಎಲ್ಲಾ ಬೀದಿ ದೀಪಗಳನ್ನು ಬದಲಾಯಿಸಿ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರಥಮ ಹಂತದಲ್ಲಿ 22 ಸಾವಿರ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಪಿಪಿಪಿ ಮಾದರಿಯ ಈ ಯೋಜನೆಯಿಂದಾಗಿ ವಿದ್ಯುತ್ ಗಣನೀಯ ಪ್ರಮಾಣದಲ್ಲಿ ಉಳಿತಾಯವಾಗಲಿದ್ದು, 7 ವರ್ಷಗಳ ಉಚಿತ ನಿರ್ವಹಣೆ ಇರಲಿದೆ ಎಂದರು.

ಮೈಸೂರಿನಲ್ಲಿ ರೈತರ ಕ್ಯಾಂಟೀನ್ ಮೈಸೂರಿನಲ್ಲಿ ರೈತರ ಕ್ಯಾಂಟೀನ್ "ಭೋಜನ ಮಂದಿರ" ಉದ್ಘಾಟನೆ

ಅಕ್ರಮ ಸಕ್ರಮ: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಸಕ್ರಮಗೊಳಿಸುವ ಕುರಿತು ಸ್ಪಷ್ಟವಾದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಸಂಪುಟದ ಅನುಮೋದನೆಯೊಂದಿಗೆ ಇದನ್ನು ಅನುಷ್ಠಾನಗೊಳಿಸಲಾಗುವುದು. ಅಕ್ರಮ ನಿರ್ಮಾಣಗಳ ಪಟ್ಟಿಯನ್ನು ಸಿದ್ಧಪಡಿಸಲು ಸಮೀಕ್ಷೆ ನಡೆಸಲು ಸೂಚಿಸಲಾಗಿದ್ದು, ನಿಗದಿತ ಸಮಯದ ಒಳಗಾಗಿ ಸಕ್ರಮ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

22 Thousand LED Bulbs Will Be Adopted In Shivamogga City Said Byrathi Basavaraj

ಶಿವಮೊಗ್ಗ ನಗರದ ಬಸ್‍ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ ಕಾಮಗಾರಿ, ವಿನೋಭಾ ನಗರದ ರಸ್ತೆ ಬದಿ ಪಾದಚಾರಿ ರಸ್ತೆ ಕಾಮಗಾರಿ, ಪುರಲೆ ಒಳಚರಂಡಿ ಕಾಮಗಾರಿ, ಲಕ್ಷ್ಮೀ ಥಿಯೇಟರ್ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುಚ್ಛಯ, ಜಿಲ್ಲಾ ಪಂಚಾಯತ್ ಮುಂಭಾಗ ನೀರಿನ ಟ್ಯಾಂಕ್ ನಿರ್ಮಾಣ, ಬೊಮ್ಮನಕಟ್ಟೆ ಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುಚ್ಛಯ ನಿರ್ಮಾಣ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

ಇದೇ ಸಂದರ್ಭ, ಮಳೆಗಾಲದಲ್ಲಿ ಎಲ್ಲಿಯೂ ನೀರು ಕಟ್ಟಿ ನಿಂತು ಕೃತಕ ನೆರೆ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ರಾಜಕಾಲುವೆ ಒತ್ತುವರಿಯಾಗಿದ್ದರೆ ಅದನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮೇಯರ್ ಸುವರ್ಣಾ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಉಪಸ್ಥಿತರಿದ್ದರು.

English summary
Steps have been taken to speed smart city works in Shivamogga city and 22 thousand led bulbs will be adopted in city roads said urban development minsiter byrathi basavaraj in shivamogga,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X