Breaking; ಕೋವಿಡ್ ಪತ್ತೆ, ಭದ್ರಾವತಿ ನರ್ಸಿಂಗ್ ಹಾಸ್ಟೆಲ್ ಸೀಲ್‌ ಡೌನ್

ಶಿವಮೊಗ್ಗ, ಡಿಸೆಂಬರ್ 09; ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭದ್ರಾವತಿಯ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಆಸ್ಪತ್ರೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭ 24 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ಮೇರೆಗೆ ಆಸ್ಪತ್ರೆಯ ಒಪಿಡಿ ಮತ್ತು ನರ್ಸಿಂಗ್ ಹಾಸ್ಟೆಲ್ ಬಂದ್ ಮಾಡಲಾಗಿದೆ.

"ನರ್ಸಿಂಗ್ ಕಾಲೇಜಿನಲ್ಲಿ 24 ಮಂದಿಗೆ ಸೋಂಕು ತಗುಲಿದೆ. ಆದ್ದರಿಂದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದೇವೆ" ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ತಿಳಿಸಿದ್ದಾರೆ.

24 Covid Case Found Bhadravathi Nursing Hostel Seal Down

ನರ್ಸಿಂಗ್ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದವರನ್ನು ತಪಾಸಣೆ ಮಾಡಲಾಗುತ್ತಿದೆ. ಎಲ್ಲರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಒಂದು ದಿನ ಬಂದ್ ಮಾಡಿ, ಪೊಲೀಸರನ್ನು ನಿಯೋಜಿಸಲಾಗಿದೆ.

ಡಿಸೆಂಬರ್ 8ರ ಹೆಲ್ತ್ ಬುಲೆಟಿನ್‌ ಪ್ರಕಾರ ಕರ್ನಾಟಕದಲ್ಲಿ 399 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 7255 ಆಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 5 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 151 ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+