ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಹಾಸ್ಟೆಲ್‌ನ 27 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ, ಮಾರ್ಚ್ 11: ಹೊಟ್ಟೆನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್‌ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುರುವಾರ ರಾತ್ರಿ ಈ ಘಟನೆ ಸಂಭವಿಸಿದೆ.

ಶಿವಮೊಗ್ಗದ ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ.

ಕೂಡಲೇ ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Shivamogga: 27 Girl Students of Sahyadri College Hostel ill; Hospitalization

ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ. ಕಾಂತೇಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಬಳ್ಳೆಕೆರೆ ಸಂತೋಷ್ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+