ಶಿವಮೊಗ್ಗದಲ್ಲಿ ಬೈಕ್ ಮುಖಾಮುಖಿ ಡಿಕ್ಕಿ: ಯುವಕ ದಾರುಣ ಸಾವು
ಶಿವಮೊಗ್ಗ, ಸೆಪ್ಟೆಂಬರ್ 04: ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಗುತ್ತಿಹಳ್ಳ ಬಳಿ ನಡೆದಿದೆ. ಶಿವಮೊಗ್ಗ ತಾಲೂಕಿನ ಸಂಪಿಗೆಹಳ್ಳ ನಿವಾಸಿಯಾಗಿರುವ ಮಂಜುನಾಥ್ ಗದ್ದೆಮನೆ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್ವೊಂದು ಡೈರಿಗೆ ಹಾಲು ಹಾಕಿ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದ ಬರುತ್ತಿದ್ದ ಮಂಜುನಾಥ್ ಬೈಕಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಇಬ್ಬರೂ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಇಬ್ಬರು ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಅಪಘಾತದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಮಂಜುನಾಥ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಮಂಜುನಾಥ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ. ಸದ್ಯ ಮಂಜುನಾಥ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಘಟನಾ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ಮಂಜುನಾಥ್ ಗದ್ದೆಮನೆ ಕಳೆದ ಏಪ್ರಿಲ್‌ನಲ್ಲಿ ವಿವಾಹವಾಗಿದ್ದು, ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.












Click it and Unblock the Notifications