ಶಿವಮೊಗ್ಗ; ಬ್ರಿಟನ್‌ನಿಂದ ವಾಪಸ್ ಆದ ನಾಲ್ವರಿಗೆ ಕೋವಿಡ್ ಸೋಂಕು

ಶಿವಮೊಗ್ಗ, ಡಿಸೆಂಬರ್ 24: ಬ್ರಿಟನ್‌ನಿಂದ ಶಿವಮೊಗ್ಗಕ್ಕೆ ವಾಪಸ್ ಆದ ನಾಲ್ವರಿಗೆ ಕೋವಿಡ್ ಸೋಂಕು ತಗುಲಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೊಸ ರೂಪಾಂತರ ಕೊರೋನಾ ಪರೀಕ್ಷೆಗಾಗಿ ಮಾದರಿಗಳನ್ನು ಬೆಂಗಳೂರಿಗೆ ಕಳಿಸಲಾಗಿದೆ.

ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್ ಸೋಂಕು ತಗುಲಿದೆ. ಡಿಸೆಂಬರ್ 21ರಂದು ಬ್ರಿಟನ್‌ನಿಂದ ಎಲ್ಲರೂ ನಗರಕ್ಕೆ ವಾಪಸ್ ಆಗಿದ್ದರು. ಜಿಲ್ಲಾಡಳಿತದ ವತಿಯಿಂದ ಎಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ವರದಿ ಪಾಸಿಟಿವ್ ಬಂದಿದೆ.

4 Tested Positive For COVID 19 Who Returned From UK

ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಗುರುವಾರ ಸಂಜೆ ವೇಳೆಗೆ ವರದಿ ಜಿಲ್ಲಾಡಳಿತ ಕೈ ಸೇರುವ ನಿರೀಕ್ಷೆ ಇದೆ. ಹೊಸ ರೂಪಾಂತರ ವೈರಸ್ ಬಗ್ಗೆ ವರದಿ ಬಂದ ಬಳಿಕ ಮಾಹಿತಿ ಸಿಗಲಿದೆ.

ಬ್ರಿಟನ್‌ನಿಂದ ಹೊರಟಾಗ ನಾಲ್ವರಿಗೆ ಕೋವಿಡ್ ಪರೀಕ್ಷೆ ಮಾಡಿಲ್ಲ. ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಪರೀಕ್ಷೆ ಮಾಡಿಲ್ಲ ಎಂಬ ಮಾಹಿತಿ ಇದೆ. ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಸೋಮವಾರ ಎಲ್ಲರೂ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದಾರೆ. ನಾಲ್ವರ ಗಂಟಲು, ಮೂಗಿನ ದ್ರಾವಣ ಮತ್ತು ರಕ್ತದ ಮಾದರಿಗಳನ್ನು ಪಡೆದು ಹೊಸ ರೂಪಾಂತರ ವೈರಸ್ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಬುಧವಾರದ ವರದಿ ಪ್ರಕಾರ ಶಿವಮೊಗ್ಗದಲ್ಲಿ 13 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 21,912. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳು 185.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+