ಶಿವಮೊಗ್ಗ; ಹರ್ಷ ಹತ್ಯೆಯಲ್ಲಿ ಐವರು ಭಾಗಿಯಾಗಿರುವ ಶಂಕೆ

ಶಿವಮೊಗ್ಗ, ಫೆಬ್ರವರಿ 20; ಬಜರಂಗದಳ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ ಸೋಮವಾರ ಸಂಜೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಿತು. ಹರ್ಷ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಗರದಲ್ಲಿ ಕಲ್ಲು ತೂರಾಟದ ಘಟನೆಗಳು ನಡೆದಿವೆ.

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರಿಕಾಗೋಷ್ಠಿ ನಡೆಸಿದರು. "ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 3 ಆರೋಪಿಗಳನ್ನು ಬಂಧಿಸಲಾಗಿದೆ. ಹತ್ಯೆ ಪ್ರಕರಣದಲ್ಲಿ ಐವರು ಭಾಗಿಯಾಗಿರುವ ಮಾಹಿತಿ ಇದೆ" ಎಂದರು.

"ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ವಿಶ್ಲೇಷಿಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಶ್ರಮಿಸುತ್ತಿದ್ದಾರೆ. ಬೆಂಗಳೂರಿನಿಂದ ಸಹ ಪೊಲೀಸರನ್ನು ಕಳುಹಿಸಲಾಗಿದೆ" ಎಂದು ಗೃಹ ಸಚಿವರು ಹೇಳಿದರು.

Araga Jnanendra

"ನಗರದ ಭದ್ರತೆಗೆ ಬೆಂಗಳೂರಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 8 ಪಿಎಸ್‌ಐ, 200 ಹೆಡ್ ಕಾನ್ಸ್‌ಟೇಬಲ್, ಕಾನ್ಸ್‌ಟೇಬಲ್ ನಿಯೋಜನೆ ಮಾಡಲಾಗಿದೆ. ಎಡಿಜಿಪಿ ಎಸ್. ಮುರುಗನ್‌ ಅವರನ್ನು ಶಿವಮೊಗ್ಗಕ್ಕೆ ಕಳುಹಿಸಲಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಶ್ರಮಿಸುತ್ತಿದ್ದಾರೆ" ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

"ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಹಂತದಲ್ಲಿ ಇರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇಂದು ಬೆಳಗ್ಗೆ ಹರ್ಷನ ತಂದೆ, ತಾಯಿಯನ್ನು ಭೇಟಿಯಾಗಿದ್ದೆವು. ನನ್ನ ಮಗನನ್ನು ತಂದುಕೊಡಲಾಗುವುದಿಲ್ಲ. ಸೂಕ್ತ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ" ಎಂದರು.

"ಸದ್ಯಕ್ಕೆ ಯಾವುದೇ ಸಂಘಟನೆ ನಿಷೇಧಿಸುವ ಬಗ್ಗೆ ನಿರ್ಧರಿಸಿಲ್ಲ. ಅದಕ್ಕೆ ಹಲವಾರು ಕಾನೂನು ಪ್ರಕ್ರಿಯೆಗಳಿವೆ. ಸಮಯ ನೋಡಿಕೊಂಡು ಸಂಘಟನೆ ನಿಷೇಧ ಮಾಡುತ್ತೇವೆ" ಎಂದು ಗೃಹ ಸಚಿವರು ಹೇಳಿದರು.

ಘಟನೆ ಬಗ್ಗೆ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದ ಶಿವಮೊಗ್ಗ ನಗರ ಶಾಸಕ ಕೆ. ಎಸ್. ಈಶ್ವರಪ್ಪ, "ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಡಿ. ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ" ಎಂದು ಹೇಳಿದ್ದರು.

ಸೋಮವಾರ ಮಧ್ಯಾಹ್ನ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಂಸದ ಬಿ. ವೈ. ರಾಘವೇಂದ್ರ, ಈಶ್ವರಪ್ಪ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.

ಹರ್ಷ ಅಂತ್ಯಕ್ರಿಯೆ; ಭಾನುವಾರ ರಾತ್ರಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ ಸೋಮವಾರ ಸಂಜೆ ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನಡೆಯಿತು. ಹರ್ಷ ಮನೆಯಿಂದ ಚಿತಾಗಾರದ ತನಕ ಸುಮಾರು 5 ಕಿ. ಮೀ. ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ನೂರಾರು ಜನರು ಪಾಲ್ಗೊಂಡಿದ್ದರು.

ಹರ್ಷ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಉದ್ರಿಕ್ತರು ಸಿದ್ದಯ್ಯ ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ. ಎಚ್. ರಸ್ತೆಯಲ್ಲಿಯೂ ಮೆರವಣಿಗೆ ಸಾಗುವಾಗ ಹೊಳೆ ಬಸ್ ನಿಲ್ದಾಣದ ಬಳಿ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ಮೆರವಣಿಗೆ ವೇಳೆ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಅಶ್ರುವಾಯು ಪ್ರಯೋಗ ಮಾಡಿ ಜನರನ್ನು ಚದುರಿಸಿದರು. ಮರಾಠ ಭಾವಸಾರ ಕ್ಷತ್ರಿಯ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಿತು. ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು. ಹರ್ಷ ತಂದೆ ನಾಗರಾಜ್ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+