ಶಿವಮೊಗ್ಗ ಜಿಲ್ಲೆಯಲ್ಲಿ 700 ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಶಿವಮೊಗ್ಗ, ಜುಲೈ 16: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 58 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 700 ರ ಗಡಿ ದಾಟಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 702 ಕೊರೊನಾ ವೈರಸ್ ಸೋಂಕಿತರ ಪೈಕಿ ಈವರೆಗೆ 280 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 409 ಕೊರೊನಾ ವೈರಸ್ ಸಕ್ರೀಯ ಪ್ರಕರಣಗಳು ಇದ್ದು, ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 176, ಕೇರ್ ಸೆಂಟರ್ ನಲ್ಲಿ 219 ಜನರಿಗೆ ಚಿಕಿತ್ಸೆ ಮುಂದುವರಿದಿದೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಹ 14 ಜನರಿಗೆ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. ಇಂದು ಒಬ್ಬರು ಸೇರಿದಂತೆ ಈವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 13 ಜನರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ ಜಿಲ್ಲಾ ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದ್ದು, ಇಂದಿನ ಪ್ರಕರಣಗಳ ತಾಲ್ಲೂಕುವಾರು ವರದಿ ಹೀಗಿದೆ.
ಶಿವಮೊಗ್ಗ-37
ಶಿಕಾರಿಪುರ-03
ಸಾಗರ-04
ಭದ್ರಾವತಿ- 03
ಹೊಸನಗರ-02
ಸೊರಬ-01












Click it and Unblock the Notifications