ಪಕ್ಷ ವಿರೋಧಿ ಚಟುವಟಿಕೆ: ಶಿವಮೊಗ್ಗದ 8 ಬಿಜೆಪಿ ಮುಖಂಡರ ಉಚ್ಚಾಟನೆ

ಶಿವಮೊಗ್ಗ, ಆಗಸ್ಟ್.27: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿಯ 8 ಜನರನ್ನು ಉಚ್ಛಾಟನೆ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರುದ್ರೇಗೌಡ ಆದೇಶಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸಿರುವ ಪಕ್ಷದ 8 ಜನರನ್ನು ಉಚ್ಛಾಟನೆ ಮಾಡಲಾಗಿದೆ. 3ನೇ ವಾರ್ಡ್ ನಿಂದ ಸ್ಪರ್ಧಿಸಿರುವ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಧೀರರಾಜ್ ಹೊನ್ನವಿಲೆ, 9ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಎಸ್.ಶಿವಕುಮಾರ್.

7ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷೆ ಸುಮಿತ್ರಾ ರಂಗನಾಥ್, 2ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಬಿಜೆಪಿ ಸದಸ್ಯ ವಿ.ಭಗವಾನ್, 16ನೇ ವಾರ್ಡ್ ನಿಂದ ಸ್ಪರ್ಧಿಸಿರುವ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೀತಾ ಬಾಬು.

8 people expelled from the BJP in Shivamogga

8ನೇ ವಾರ್ಡ್ ನಿಂದ ಸ್ಪರ್ಧಿಸಿರುವ ನಗರ ಬಿಜೆಪಿ ವಿಶೇಷ ಆಹ್ವಾನಿತ ಮಹೇಶ್ ಮೂರ್ತಿ, 7ನೇ ವಾರ್ಡ್ ನಿಂದ ಸ್ಪರ್ಧಿಸಿರುವ ನಗರ ಮಹಿಳಾ ಮೋರ್ಚಾ ಸದಸ್ಯೆ ಸೌಭಾಗ್ಯ, 28ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಯುವ ಮೋರ್ಚಾ ನಗರ ಸಮಿತಿ ಸದಸ್ಯ ಎನ್.ಹರೀಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+