ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಣಸೋಡು ಸ್ಪೋಟದ ಸುತ್ತ ಒಂದು ನೋಟ: ಸಿಎಂ ಯಡಿಯೂರಪ್ಪ ಭೇಟಿ

|
Google Oneindia Kannada News

ಶಿವಮೊಗ್ಗ, ಜನವರಿ 23: ಕಲ್ಲುಗಣಿ ವ್ಯಾಪ್ತಿಯಲ್ಲಿ ಜಿಲೆಟಿನ್ ಸ್ಪೋಟದಿಂದ ಭಾರೀ ದುರಂತ ಸಂಭವಿಸಿದ್ದು, 5 ಜನ ಕಾರ್ಮಿಕರು ಸಾವನ್ನಪ್ಪಿದ್ದು, ಕಾರ್ಮಿಕರ ದೇಹಗಳು ಛಿದ್ರವಾಗಿವೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವವಿದೆ.

ಶಿವಮೊಗ್ಗ ತಾಲ್ಲೂಕಿನ ಹುಣಸೋಡು ಬಳಿಯ ಕಲ್ಲು ಕ್ವಾರಿಯಲ್ಲಿ ಲಾರಿಯಲ್ಲಿದ್ದ ಡೈನಾಮಿಕ್ ಘರ್ಷಣೆಯಿಂದ ಸ್ಪೋಟಗೊಂಡಿದೆ. ಬಿಹಾರ ಮೂಲದ ಕಾರ್ಮಿಕರು ಸಾವನ್ನಪ್ಪಿದ್ದು, ಲಾರಿಯಲ್ಲಿ 50ಕ್ಕೂ ಹೆಚ್ಚು ಜೆಲೆಟಿನ್ ಬಾಕ್ಸ್ ಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.

ಶಿವಮೊಗ್ಗ ಸ್ಪೋಟ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ!ಶಿವಮೊಗ್ಗ ಸ್ಪೋಟ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ!

ಗುರುವಾರ ರಾತ್ರಿ 10.25ರ ಸುಮಾರಿಗೆ ಭಾರೀ ಸ್ಪೋಟ ಸಂಭವಿಸಿದ್ದು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ ಜಿಲ್ಲೆಯ ಪ್ರದೇಶಗಳಿಗೂ ಭಾರೀ ಸ್ಪೋಟದ ಸದ್ದು ಕೇಳಿದೆ. ಇದನ್ನು ಮೊದಲಿಗೆ ಭೂಕಂಪ ಎಂದೇ ಪರಿಗಣಿಸಿದ್ದರೂ, ನಂತರ ಕಲ್ಲು ಕ್ವಾರಿಯಲ್ಲಿ ನಡೆದ ಸ್ಪೋಟ ಎಂಬುದು ತಿಳಿಯಿತು.

ಹಲವು ಅಕ್ರಮವಾಗಿ ನಡೆಯುತ್ತಿವೆ

ಹಲವು ಅಕ್ರಮವಾಗಿ ನಡೆಯುತ್ತಿವೆ

ದಶಕಗಳಿಂದಲೂ ಈ ಭಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಕೆಲವು ಅನುಮತಿ ಪಡೆದವುಗಳಿದ್ದರೆ, ಇನ್ನು ಹಲವು ಅಕ್ರಮವಾಗಿ ನಡೆಯುತ್ತಿವೆ ಎಂಬುದು ಸ್ಥಳೀಯರ ಆರೋಪವಾಗಿದೆ. ರಾಜಕೀಯ ಪ್ರಭಾವ ಬಳಸಿಕೊಂಡು ಇಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರೇ ಹೇಳುತ್ತಾರೆ.

ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯ

ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯ

ಹುಣಸೋಡು ಸ್ಪೋಟ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ಮಾಡಬೇಕೆಂದು ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಗಳಾದ ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರುಗಳು ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಹಾಗೂ ಅವರಿಗೆ ಪ್ರೋತ್ಸಾಹ ನೀಡುತ್ತಿರುವವರನ್ನು ಬಂಧಿಸಿ ವಿಚಾರಣೆಗೊಳಪಡಿಸಿಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

"ಹುಣಸೋಡು ದುರ್ಘಟನೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ''

ಹುಣಸೋಡು ಸ್ಪೋಟಕ್ಕೆ ರಾಷ್ಟ್ರೀಯ ನಾಯಕರ ಸಂತಾಪ

ಹುಣಸೋಡು ಸ್ಪೋಟಕ್ಕೆ ರಾಷ್ಟ್ರೀಯ ನಾಯಕರ ಸಂತಾಪ

ಶಿವಮೊಗ್ಗದ ಹುಣಸೋಡು ಸ್ಪೋಟ ಪ್ರಕರಣಕ್ಕೆ ರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕರು ಸ್ಪೋಟದಲ್ಲಿ ಪ್ರಾಣ ಹಾನಿ ಸಂಭವಿಸಿದ್ದಕ್ಕೆ ತೀವ್ರ ಸಂತಾಪ ಸೂಚಿಸಿ ಹಾಗೂ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಈಶ್ವರಪ್ಪನವರೇ ಅಕ್ರಮ ಗಣಿಗಾರಿಕೆಯ ರಕ್ಷಕ

ಸಚಿವ ಈಶ್ವರಪ್ಪನವರೇ ಅಕ್ರಮ ಗಣಿಗಾರಿಕೆಯ ರಕ್ಷಕ

ಹುಣಸೋಡು ಸ್ಪೋಟಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್ ಅವರು ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಮೇಲೆ ಗಂಭೀರ ಆರೋಪ ಮಾಡಿದ್ದು, ಈಶ್ವರಪ್ಪನವರೇ ಜಿಲ್ಲೆಯ ಅಕ್ರಮ ಗಣಿಗಾರಿಕೆಯ ರಕ್ಷಕರು ಎಂದಿದ್ದಾರೆ. ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯನ್ನು ತಡೆಯುವಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಉಸ್ತುವಾರಿ ಸಚಿವರು ಅಡ್ಡಿ ಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕೂಡ ಈ ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

ಪ್ರಾಣ ಕಳೆದುಕೊಂಡವರಿಗೆ ತಲಾ 5 ಲಕ್ಷ ರೂ. ಪರಿಹಾರ

ಪ್ರಾಣ ಕಳೆದುಕೊಂಡವರಿಗೆ ತಲಾ 5 ಲಕ್ಷ ರೂ. ಪರಿಹಾರ

ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಪೋಟದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ತಲಾ ೫ ಲಕ್ಷ ರೂ. ಪರಿಹಾರವನ್ನು ಸಿಎಂ ಯಡಿಯೂರಪ್ಪನವರು ಘೋಷಿಸಿದ್ದಾರೆ. ಅಲ್ಲದೆ ಭೀಕರ ಸ್ಪೋಟ ಪ್ರಕರಣದ ಕುರಿತು ಮಾಹಿತಿ ತರಿಸಿಕೊಂಡಿದ್ದು, ಘಟನೆಗೆ ಕಾರಣ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ. ಶಿವಮೊಗ್ಗಕ್ಕೆ ನಾನೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಸ್ಪೋಟ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ತಜ್ಞರ ತಂಡ ಆಗಮಿಸಿದ್ದು, ತನಿಖೆಯ ವರದಿ ಬಂದ ಮೇಲೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ

ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ

ಸ್ಪೋಟಗೊಂಡ ಹುಣಸೋಡು ಗ್ರಾಮಕ್ಕೆ ಶುಕ್ರವಾರ ಬೆಳಿಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿದ್ದರು. ನಂತರ ಮಾತನಾಡಿದ ಅವರು, "ಹುಣಸೋಡಿನ ನಡೆದ ಸ್ಫೋಟವು ಶಿವಮೊಗ್ಗ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಯ ಜನರನ್ನು ತಲ್ಲಣಗೊಳಿಸಿದ್ದು, ಈ ಸ್ಫೋಟಕ್ಕೂ ಹಾಗೂ ಗಣಿಗಾರಿಕೆಗೆ ಸಂಬಂಧವಿದೆಯಾ? ಎಂಬುದರ ಬಗ್ಗೆ ತನಿಖಾ ತಂಡ ಸ್ಪಷ್ಟತೆ ನೀಡಲಿದೆ' ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.

ಉನ್ನತ ಮಟ್ಟದ ಸಮಿತಿ ರಚನೆ

ಉನ್ನತ ಮಟ್ಟದ ಸಮಿತಿ ರಚನೆ

ಶಿವಮೊಗ್ಗದ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಇಲ್ಲಿ ಕಲ್ಲು ಗಣಿಗಾರಿಕೆ ಅಧಿಕೃತವಾಗಿ ನಡೆಯುತ್ತಿತ್ತೇ ಅಥವಾ ಅನಧಿಕೃತವಾಗಿತ್ತೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಆದಷ್ಟು ಬೇಗನೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ, ಪರಿಶೀಲನೆ

ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ, ಪರಿಶೀಲನೆ

ಕಲ್ಲು ಕ್ವಾರಿಯಲ್ಲಿದ ಲಾರಿಯಲ್ಲಿ ಜಿಲೆಟಿನ್ ಸ್ಪೋಟಗೊಂಡು 5 ಜನ ಕಾರ್ಮಿಕರು ಸಾವನ್ನಪ್ಪಿದ್ದು, ಇದು ದೇಶದಾದ್ಯಂತ ಸುದ್ದಿಯಾಗಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಪ್ರಾಥಮಿಕ ವರದಿ ತರಿಸಿಕೊಂಡಿರುವ ಸಿಎಂ ಯಡಿಯೂರಪ್ಪ ಅವರು, ಖುದ್ದು ಘಟನಾ ಸ್ಥಳ ಪರಿಶೀಲನೆ ನಡೆಸಲು ಶನಿವಾರ ಆಗಮಿಸಲಿದ್ದಾರೆ.

English summary
Opposition leaders have demanded a thorough and impartial investigation into the Hunasodu explosion case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X