ಸೆಲ್ಫಿ ತಂದ ಕುತ್ತು: ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿಯಲ್ಲಿ ಯುವಕನ ದಾರುಣ ಸಾವು
ಶಿವಮೊಗ್ಗ, ಆಗಸ್ಟ್ 26: ಕಲ್ಯಾಣಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್ (21) ಮೃತ ಯುವಕ ಎಂದು ಗುರುತಿಸಲಾಗಿದೆ.
ತಾಹೀರ್ ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಶಿಕಾರಿಪುರ ತಾಲೂಕಿನ ಉಡತಡಿಗೆ ಬಂದಿದ್ದನು. ಸ್ನೇಹಿತರೊಂದಿಗೆ ಸಮಯ ಕಳೆಯುತ್ತಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುಲು ಮುಂದಾಗಿದ್ದಾನೆ. ಈ ವೇಳೆ ದುರಾದೃಷ್ಟವಶಾತ್ ತಾಹೀರ್, ಕಾಲುಜಾರಿ ಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಲಿಸುತ್ತಿದ್ದ ಓಮಿನಿ ಕಾರಿಗೆ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಓಮಿನಿ
ಚಿಕ್ಕಮಗಳೂರು: ಚಲಿಸುತ್ತಿದ್ದ ಓಮಿನಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಓಮಿನಿ ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೇಗಾರ್ ಕಡೆಯಿಂದ ಶೃಂಗೇರಿಗೆ ಬರುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಾಲಕ ಯುವನ್ ತಕ್ಷಣ ಕಾರನ್ನು ನಿಲ್ಲಿಸಿ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗ್ಯಾಸ್ ಚಾಲಿತ ವಾಹನವಾದ ಕಾರಣ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ: ಪೊಲೀಸ್ ರೇಡ್ ವೇಳೆ ಆರೋಪಿ ಎಸ್ಕೇಪ್
ಚಿಕ್ಕಮಗಳೂರು: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ ಗಾಂಜಾವನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಳ್ಳಾವರ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಚಿಕ್ಕಮಗಳೂರು ಸಿ.ಇ.ಎನ್ ಠಾಣೆಯ ಪಿಎಸ್‌ಐ ರಘುನಾಥ್ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಪೊಲೀಸರು ದಾಳಿ ನಡೆಸುವ ಮಾಹಿತಿ ತಿಳಿದು ಆರೋಪಿ ಸ್ಥಳದಿಂದ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಆರೋಪಿ ಮಾರಾಟ ಮಾಡುತ್ತಿದ್ದ 1 ಕೆಜಿ 60 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications