• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಸಾವರ್ಕರ್ ವಿಚಾರಕ್ಕೆ ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ: ಶಾಲಾ- ಕಾಲೇಜುಗಳಿಗೆ ರಜೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್‌ 15: ನಗರದಲ್ಲಿ ವೀರ್‌ ಸಾವರ್ಕರ್‌ ಫೋಟೋ ವಿವಾದ ಬುಗೆಲೆದ್ದ ಸಮಯದಲ್ಲೇ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದು. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

20 ವರ್ಷದ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿದೆ. ನಗರ ಉಪ್ಪಾರಕೇರಿಯಲ್ಲಿ ಘಟನೆ ಸಂಭವಿಸಿದೆ. ಪ್ರೇಮ್‌ ಸಿಂಗ್‌ ಚಾಕು ಇರಿದಿರುವ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದರು.

ಮತ್ತೆ ಭುಗಿಲೆದ್ದ ಸಾವರ್ಕರ್ ಫೋಟೊ ವಿವಾದ: ಶಿವಮೊಗ್ಗದಲ್ಲಿ ಲಘು ಲಾಠಿ ಪ್ರಹಾರ, ನಿಷೇಧಾಜ್ಞೆಮತ್ತೆ ಭುಗಿಲೆದ್ದ ಸಾವರ್ಕರ್ ಫೋಟೊ ವಿವಾದ: ಶಿವಮೊಗ್ಗದಲ್ಲಿ ಲಘು ಲಾಠಿ ಪ್ರಹಾರ, ನಿಷೇಧಾಜ್ಞೆ

ಈ ವೇಳೆ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ, ಎ.ಎ ಸರ್ಕಲ್‌ನಲ್ಲಿ ಗಲಾಟೆಯಾದ ಹಿನ್ನೆಲೆ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಎಂಕೆಕೆ ರಸ್ತೆಯ ಸಿಲ್ಕ್ ಅಂಗಡಿಯಲ್ಲಿ ಪ್ರೇಮ್ ಸಿಂಗ್ ಕೆಲಸ ಮಾಡುತ್ತಿದ್ದ. ಗಲಾಟೆ ತೀವ್ರವಾಗಿ ಪೊಲೀಸರು ಅಂಗಡಿ ಬಾಗಿಲು ಹಾಕಿಸಿದ್ದರಿಂದ ಸ್ನೇಹಿತನ ಜೊತೆಗೆ ಒಟ್ಟಿಗೆ ಮನೆ ಕಡೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದು ಉದ್ದೇಶಪೂರ್ವಕವಾಗಿ ನಡೆದ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್‌ ಮೂಲಕ ಘಟನೆಯನ್ನು ತಿಳಿಗೊಳಿಸಿದ್ದರು, ಸ್ವಲ್ಪ ಹೊತ್ತಿನ ಬಳಿಕ ಈ ದುರ್ಘಟನೆ ನಡೆದಿದೆ.

ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿ
ಸಾವರ್ಕರ್ ಫ್ಲೆಕ್ಸ್ ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಿವಮೊಗ್ಗದಲ್ಲೂ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

A youth Stabbed in Shivamogga, Prohibitory orders by Tahsildar

ಶಿವಮೊಗ್ಗ, ಭದ್ರಾವತಿ ಶಾಲೆ, ಕಾಲೇಜಿಗೆ ರಜೆ:

144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನಲೆ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ ಆ.16 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ತಿಳಿಸಿದ್ದಾರೆ.

English summary
A case of stabbing was reported in Shivamogga, hours after a row erupted over a poster of Veer Savarkar put up at Ameer Ahmed circle on Independence Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X