ಶಿವಮೊಗ್ಗ ಉಪ ಚುನಾವಣೆ : ಮಧು ಬಂಗಾರಪ್ಪಗೆ ಎಎಪಿ ಬೆಂಬಲ
Recommended Video

ಶಿವಮೊಗ್ಗ, ಅಕ್ಟೋಬರ್ 26 : ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಬೆಂಬಲ ಘೋಷಣೆ ಮಾಡಿದೆ. ನವೆಂಬರ್ 3ರಂದು ಲೋಕಸಭೆ ಉಪ ಚುನಾವಣೆ ನಡೆಯಲಿದೆ.
ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ರವಿ ಕುಮಾರ್ ಅವರು ಬೆಂಬಲ ಘೋಷಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಅಧಿಕಾರದಿಂದ ದೂರವಿಡಲು ಮಧು ಬಂಗಾರಪ್ಪ ಅವರನ್ನು ಬೆಂಬಲಿಸುವುದಾಗಿ ಪಕ್ಷ ಹೇಳಿದೆ.
ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಒಮ್ಮತದ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಣದಲ್ಲಿದ್ದಾರೆ. ನವೆಂಬರ್ 3ರಂದು ಚುನಾವಣೆ ನಡೆಯಲಿದೆ.
ಬಿಜೆಪಿಯಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅಭ್ಯರ್ಥಿಯಾಗಿದ್ದಾರೆ.ಜೆಡಿಯು ಪಕ್ಷದ ಮಹಿಮಾ ಪಟೇಲ್ ಸೇರಿ ನಾಲ್ವರು ಚುನಾವಣಾ ಕಣದಲ್ಲಿದ್ದಾರೆ. ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.....

ಜಿಲ್ಲೆ ಅಭಿವೃದ್ದಿಯ ನಿರ್ಲಕ್ಷ್ಯ
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಸಂಸದರಾಗಿ ಭದ್ರಾವತಿಯ ವಿಐಎಸ್‌ಎಲ್, ಎಂಪಿಎಂ ಹಾಗೂ ಜಿಲ್ಲೆಯ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದಾರೆ. ಅವರ ನಿರ್ಲಕ್ಷ್ಯದಿಂದ ಎರಡೂ ಕಾರ್ಖನೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಈಗ ಚುನಾವಣೆ ಸಂದರ್ಭದಲ್ಲಿ ಅಭಿವೃದ್ಧಿ ಮಾಡುವುದಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಯಾವ ಪ್ರಯತ್ನವನ್ನೂ ಮಾಡಿಲ್ಲ
ಸಂಸದರಾಗಿದ್ದಾಗ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಅಭಿವೃದ್ದಿಗೆ ಯಾವ ಪ್ರಯತ್ನವನ್ನು ಮಾಡಿಲ್ಲ. ಬಿಜೆಪಿ ಅಭ್ಯರ್ಥಿಯಾದ ಅವರನ್ನು ಅಧಿಕಾರದಿಂದ ದೂರವಿಡಲು ಲೋಕಸಭೆ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರನ್ನು ಉಪ ಚುನಾವಣೆಯಲ್ಲಿ ಬೆಂಬಲಿಸಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷ ಹೇಳುತ್ತಿದೆ.

ಉಪ ಚುನಾವಣೆ ಬೇಕಾಗಿರಲಿಲ್ಲ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಗತ್ಯವಿರಲಿಲ್ಲ. ಜನರ ಕೋಟ್ಯಾಂತರ ರೂ. ತೆರಿಗೆ ಹಣ ಖರ್ಚು ಮಾಡಿ ಉಪ ಚುನಾವಣೆ ನಡೆಸಲಾಗುತ್ತಿದೆ. ಕೋಮುವಾದಿ ಪಕ್ಷವನ್ನು ದೂರವಿಡಲು ಉಪ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಬೆಂಬಲಿಸಲಾಗುತ್ತಿದೆ ಎಂದು ಎಎಪಿ ಹೇಳಿದೆ.

ಮೂವರು ಮಾಜಿ ಸಿಎಂ ಮಕ್ಕಳು
ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಹಲವು ಕಾರಣಗಳಿಗೆ ಕುತೂಹಲಕ್ಕೆ ಕಾರಣವಾಗಿದೆ. ಮೂವರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಚುನಾವಣಾ ಕಣದಲ್ಲಿದ್ದಾರೆ. ಆದರೆ, ಮಹಿಮಾ ಪಟೇಲ್ ಸ್ಪರ್ಧೆಗೆ ಯಾವ ಬೆಲೆಯೂ ಇಲ್ಲ. ಬಿ.ವೈ.ರಾಘವೇಂದ್ರ ಮತ್ತು ಮಧು ಬಂಗಾರಪ್ಪ ಅವರ ನಡುವೆ ಪ್ರಬಲ ಪೈಪೋಟಿ ನಡೆದಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications