ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ದಾಳಿ, ಅಧಿಕಾರಿ ಬಂಧನ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮಾರ್ಚ್ 30: ಲಂಚ ಸ್ವೀಕರಿಸುತ್ತಿದ್ದ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡಸಿ, ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮುರುಗೇಶ್ ಎಸಿಬಿ ಬಲಿಗೆ ಬಿದ್ದ ಅಧಿಕಾರಿಯಾಗಿದ್ದಾರೆ.

ವಿದ್ಯುತ್ ಸಂಪರ್ಕಕ್ಕಾಗಿ 10 ಸಾವಿರ ಲಂಚ ಸ್ವೀಕರಿಸಿದ್ದ ಇಂಜಿನಿಯರ್ ಲಕ್ಷ್ಮೀಶವಿದ್ಯುತ್ ಸಂಪರ್ಕಕ್ಕಾಗಿ 10 ಸಾವಿರ ಲಂಚ ಸ್ವೀಕರಿಸಿದ್ದ ಇಂಜಿನಿಯರ್ ಲಕ್ಷ್ಮೀಶ

ಒಂದು ಲಕ್ಷ ಲಂಚಕ್ಕೆ ಬೇಡಿಕೆ
ಸ್ಥಳೀಯರೊಬ್ಬರಿಗೆ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗದ ನಿವೇಶನಗಳಿಗೆ ಪ್ಲಾನಿಂಗ್ ಅಪ್ರೂವಲ್ ಮತ್ತು ಮ್ಯೂಟೇಶನ್ ಮಾಡಿಕೊಡಲು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮುರುಗೇಶ್ ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಮೊದಲ ಕಂತಿನಲ್ಲಿ 20 ಸಾವಿರ ರೂ. ಲಂಚದ ಹಣವನ್ನು ಸ್ವೀಕರಿಸಿದ್ದಾನೆ.

ACB Officilas Raid On Grade 1 PDO Officer While Receiving Bribe in Hosanagara Taluk

ಬುಧವಾರ ಮಧ್ಯಾಹ್ನ ಎರಡನೇ ಕಂತಿನ ಲಂಚದ ಹಣ 30 ಸಾವಿರ ರೂ. ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣದ ಸಹಿತ ಮುರುಗೇಶ್ ಸಿಕ್ಕಿಬಿದ್ದಿದ್ದಾನೆ. ಆತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ಪೂರ್ವ ವಲಯ ಪೊಲೀಸ್ ಅಧೀಕ್ಷಕ ಜಯಪ್ರಕಾಶ್ ಮಾರ್ಗದರ್ಶನದಲ್ಲಿ, ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್‌ಪಿ ಜೆ. ಲೋಕೇಶ್ ನೇತೃತ್ವದಲ್ಲಿ, ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿ ವಸಂತ ಕಾಯಕದ, ನಾಗರಾಜ, ರಘುನಾಯ್ಕ, ಸುರೇಂದ್ರ, ಅರುಣ್ ಪವಾರ್, ಯೋಗೇಶ್ವರಪ್ಪ, ಚರಣ್ ರಾಜ್, ಜಯಂತ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

English summary
ACB Officilas Raid On Grade 1 PDO Officer Murugesh While Receiving Bribe in Hosanagara Taluk of Shivamogga District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X