ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜಿಲ್ಲೆಯ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಕಿಚ್ಚ ಸುದೀಪ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್ 10: ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ಚಿತ್ರನಟ ಕಿಚ್ಚ ಸುದೀಪ್ ಅವರು ದತ್ತು ಪಡೆದುಕೊಂಡಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮೂಲಕ‌ ಹಂಚಿಕೊಂಡಿದ್ದಾರೆ.

ಅಪಾರ ಅಭಿಮಾನಿ ಬಳಗ ಹೊಂದಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆಗಾಗ ಚಾರಿಟಬಲ್ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವುದರ ಬಗ್ಗೆ ವರದಿಯಾಗುತ್ತಲೇ ಇರುತ್ತವೆ. ಇದೀಗ, ರಾಜ್ಯದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿರುವ ಸಂಗತಿ ಹೊರಬಿದ್ದಿದೆ.
ಕನ್ನಡ ಚಿತ್ರರಂಗ ಮಾತವಲ್ಲದೇ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಬೇಡಿಕೆಯ ನಟನಾಗಿರುವ ಸುದೀಪ್ ಅವರು ಮೂಲತಃ ಶಿವಮೊಗ್ಗದ ಜಿಲ್ಲೆಯವರಾಗಿದ್ದು, ತಮ್ಮ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿರುವುದು ಜಿಲ್ಲೆಯಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಮೈಸೂರು: ಕೊರೊನಾ ವಾರಿಯರ್ಸ್ ಗಳನ್ನು ಅಭಿನಂದಿಸಿದ ಕಿಚ್ಚ ಸುದೀಪ್ಮೈಸೂರು: ಕೊರೊನಾ ವಾರಿಯರ್ಸ್ ಗಳನ್ನು ಅಭಿನಂದಿಸಿದ ಕಿಚ್ಚ ಸುದೀಪ್

ಸಮಾಜ ಸೇವೆಯಲ್ಲೂ ಒಳ್ಳೆಯ ಹೆಸರು ಮಾಡಿರುವ ಸುದೀಪ್

ಸಮಾಜ ಸೇವೆಯಲ್ಲೂ ಒಳ್ಳೆಯ ಹೆಸರು ಮಾಡಿರುವ ಸುದೀಪ್

ಕೇವಲ ಚಿತ್ರರಂಗ ಮಾತ್ರವಲ್ಲದೇ, ಸಮಾಜ ಸೇವೆಯಲ್ಲೂ ಒಳ್ಳೆಯ ಹೆಸರು ಮಾಡಿರುವ ಸುದೀಪ್ ಅವರು ತಮ್ಮ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ಮೂಲಕ ಸಾಮಾಜಿಕ ಕೆಲಸವನ್ನು ಮಾಡುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ‌ ಹಾವಿಗೆ, ಹಾಳಸಸಿ, ಎಮ್‌.ಎಲ್‌ ಹಳ್ಳಿ ಹಾಗೂ ಎಸ್.ಎನ್ ನಗರದ ಪ್ರಾಥಮಿಕ ಶಾಲೆಗಳನ್ನು ದತ್ತು ಪಡೆದಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಿಚ್ಚನ ಈ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಕಿಚ್ಚನ ಈ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಗಾಳಿ, ಬೆಳಕು, ನೀರು, ಆಟದ ಮೈದಾನ, ಶಾಲಾ ಕಟ್ಟಡ, ಇಲ್ಲದಿರುವುದು. ಕೆಲವು ಶಾಲೆಗಳಲ್ಲಿ ಮಕ್ಕಳು ಕೊಠಡಿಗಳಿಲ್ಲದೆ ಮರದ ಕೆಳಗೆ ಕುಳಿತು ಪಾಠ ಕೇಳುವ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ. ಇಂತಹ ಒಂದು ಸಂದರ್ಭದಲ್ಲಿ ಕಿಚ್ಚ ಸುದೀಪ್ ತನ್ನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗದಲ್ಲಿ 04 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ದತ್ತು ಪಡೆದುಕೊಂಡಿದ್ದಾರೆ. ಕಿಚ್ಚನ ಈ ಕಾರ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದೀಪ್​ ಕಾರ್ಯಕ್ಕೆ ಸಚಿವ ಡಾ.ಕೆ.ಸುಧಾಕರ್​​ ಮೆಚ್ಚುಗೆ

ಸುದೀಪ್​ ಕಾರ್ಯಕ್ಕೆ ಸಚಿವ ಡಾ.ಕೆ.ಸುಧಾಕರ್​​ ಮೆಚ್ಚುಗೆ

ಕೊರೊನಾ ವೈರಸ್ ನಂತಹ ಸಂಕಷ್ಟ ಕಾಲದಲ್ಲೂ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ ಇದು ಸಂತಸದ ವಿಷಯವಾಗಿದೆ ಎಂದು ಸುದೀಪ್​ ಕಾರ್ಯಕ್ಕೆ ಸಚಿವ ಡಾ.ಕೆ.ಸುಧಾಕರ್​​ ಮೆಚ್ಚುಗೆ ಸೂಚಿಸಿದ್ದಾರೆ. ""ಈ ಸುದ್ದಿ ಅತ್ಯಂತ ಶ್ಲಾಘನೀಯ, ಸರ್ಕಾರದ ಜೊತೆ ಕೈಜೋಡಿಸಿ ಶಿವಮೊಗ್ಗದ 4 ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿರುವ ನಟ ಕಿಚ್ಚ ಸುದೀಪ ಅವರ ಕಾರ್ಯ ಅತ್ಯಂತ ಸಂತಸದ ವಿಷಯವಾಗಿದೆ. ಅವರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು'' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.

ಹಿರಿಯೂರು ತಾಲ್ಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು

ಹಿರಿಯೂರು ತಾಲ್ಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು

ಈ ಹಿಂದೆಯೂ ಕೂಡಾ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ದತ್ತು ಪಡೆದುಕೊಂಡಿತ್ತು. ಚಳ್ಳಕೆರೆ ತಾಲ್ಲೂಕಿನ ಮೂರು ಹಾಗೂ ಹಿರಿಯೂರು ತಾಲ್ಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. 2020-21 ರಿಂದ 2025-26 ನೇ ಸಾಲಿಗೆ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸೊಸೈಟಿ ರಿ, ಬೆಂಗಳೂರು ಈ ಸಂಸ್ಥೆಗೆ "ಬಗ್ಗನಾಡು' ಶಾಲೆಯನ್ನು ದತ್ತು ನೀಡಿ ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶಿಸಿದ್ದರು.

English summary
Sudeep, a highly sought-after actor, originally from Shivamogga district, is widely acclaimed in the district for having adopted four government schools in his district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X