ಕೃಷಿ ಇಲಾಖೆ ನೇಮಕಾತಿ: ಅರ್ಜಿ ಸಲ್ಲಿಕೆಗೆ ಮೇ 23 ಕೊನೆ ದಿನ
ಶಿವಮೊಗ್ಗ, ಮೇ 13: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕೃಷಿ ಇಲಾಖೆಯಲ್ಲಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಮೇ 23 ರೊಳಗಾಗಿ ಸಲ್ಲಿಸಬೇಕು.
ಶಿವಮೊಗ್ಗ ಜಿಲ್ಲೆಯಲ್ಲಿ 2025-26ನೇ ಸಾಲಿಗೆ 'ಆತ್ಮ ಯೋಜನೆ'ಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ ಅಪರೇಟರ್ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ.

ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು ಎಂದು ಪ್ರಕಟಣೆ ತಿಳಿಸಿದೆ.
ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಬಿ.ಟೆಕ್/ ಎಂಸಿಎ ಮತ್ತು ಕಂಪ್ಯೂಟರ್ ಅಪರೇಟರ್ ಹುದ್ದೆಗೆ ಬಿಸಿಎ/ ಪದವಿ ಜೊತೆಗೆ ಕಂಪ್ಯೂಟರ್ ಕೌಶಲ್ಯ ಹೊಂದಿರಬೇಕು. ಬಿ.ಟೆಕ್/ ಎಂಸಿಎ ಆದವರಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.
ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ 45 ವರ್ಷ ಮೀರಿರಬಾರದು. ಸ್ನಾತಕ/ ಸ್ನಾತಕೋತ್ತರ/ ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ. ಕೆಲಸ ನಿರ್ವಹಿಸಿದ ಸಂಸ್ಥೆಯು ನೀಡಿದ ನೇಮಕಾತಿ ಆದೇಶ ಪತ್ರವನ್ನು ಅರ್ಜಿಯ ಜೊತೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ಕೆಲಸ ನಿರ್ವಹಿಸಿದ ಅವಧಿಗೆ ಸಂಬಂಧಪಟ್ಟ ಸಂಸ್ಥೆಯಿಂದ ಹಾಜರಾತಿ ಪ್ರಮಾಣ ಪತ್ರ. ಸಂಸ್ಥೆಯಿಂದ ವೇತನ ದೃಢೀಕರಣ, ವೇತನ ಜಮಾ ಆದ ಕುರಿತು ಬ್ಯಾಂಕ್ ಖಾತೆಯ ವಿವರಗಳ ದಾಖಲಾತಿಗಳನ್ನು ಲಗತ್ತಿಸಬೇಕು.
ಆಸಕ್ತ ಅಭ್ಯರ್ಥಿಗಳು ಸೂಕ್ತ ವಿದ್ಯಾರ್ಹತೆ ಅನುಭವ ಹಾಗೂ ಕಂಪ್ಯೂಟರ್ ಸಾಕ್ಷರತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆಯಬೇಕು.
ಅರ್ಜಿಯನ್ನು ಭರ್ತಿ ಮಾಡಿ ಸ್ವವಿವರಗಳೊಂದಿಗೆ ಮೇ 23ರೊಳಗಾಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ-577201 ಇಲ್ಲಿಗೆ ಸಲ್ಲಿಸಬೇಕಿದೆ.
ಸಹಾಯಧನ ಪಡೆಯಲು ಅರ್ಜಿ ಆಹ್ವಾನ: ಮೀನುಗಾರಿಕೆ ಇಲಾಖೆಯು 2024-25ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡುತ್ತಿದೆ. ಆಸಕ್ತರು ಇದಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಶಿವಮೊಗ್ಗ ನಗರ/ ಗ್ರಾಮಾಂತರ ಮತ್ತು ಎಲ್ಲಾ 7 ತಾಲೂಕುಗಳಿಗೆ ತಲಾ 25 ಮನೆಗಳ (19 ಸಾಮಾನ್ಯ, 4 ಪ.ಜಾ, 2 ಪ.ಪಂ) ಗುರಿ ನಿಗದಿಪಡಿಸಲಾಗಿದೆ. ಮೀನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಮೀನುಗಾರಿಕೆ ಸಹಕಾರ ಸಂಘಗಳಲ್ಲಿ ನೋಂದಾಯಿಸಿಕೊಂಡಿರುವ ಮೀನುಗಾರರು ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೆಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಜೂನ್ 30ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೆಶಕರ ಕಚೇರಿಯನ್ನು ಸಂಪರ್ಕಿಸಬೇಕು.












Click it and Unblock the Notifications