Shivamogga Airport Name : ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಅಂತಿಮ: BSY

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೆ ಸ್ವಯಃ ಯಡಿಯೂರಪ್ಪನವರೇ ಹೆಸರು ಅಂತಿಮಗೊಳಿಸಿದ್ದಾರೆ.

ಶಿವಮೊಗ್ಗ, ಫೆಬ್ರವರಿ 12: ನೂತನವಾಗಿ ನಿರ್ಮಾಣವಾದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡಬೇಕು ಎಂಬ ಮಾತುಗಳು ಕೇಳಿ ಬಂದಿತ್ತು. ಈ ಬಗ್ಗೆ ಒಂದಷ್ಟು ಚರ್ಚೆಗಳು ಶುರುವಾದ ಬೆನ್ನಲ್ಲೆ ಹೆಸರು ಅಂತಿಮಗೊಳಿಸುವ ಪ್ರಕ್ರಿಯೆಗೆ ಶೀಘ್ರವೇ ತೆರೆ ಬೀಳುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರು ಇಡಬೇಕೆಂಬ ಆಗ್ರಹ ಹೆಚ್ಚಾಗಿತ್ತು. ಇದರ ಬೆನ್ನಲ್ಲೆ ಭಾನವಾರ ಶಿವಮೊಗ್ಗ ತುರ್ತು ಸುದ್ದಿಗೋಷ್ಠಿ ನಡೆಸಿದ ಸ್ವತಃ ಯಡಿಯೂರಪ್ಪನವರೆ ಹೆಸರು ಬಹಿರಂಗಪಡಿಸಿ, ಚರ್ಚೆಗೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು (Airport Name) ಇಡುವುದು ಬೇಡ. ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನೆ ಇಡಬೇಕು. ಇದೇ ಸರಿಯಾದ ಹೆಸರಾಗಿದ್ದು, ಸದ್ಯ ನಡೆಯುತ್ತಿರುವ ವಿಧಾನಮಂಡಲ ಜಂಟಿ ಅಧಿವೇಶನದಲ್ಲೂ ಈ ಕುರಿತು ಪ್ರಸ್ತಾಪಿಸುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

Airport Name: BS Yediyurappa finalized the name of Shivamogga airport.

ಈ ನಾಡು 20ನೇ ಶತಮಾನ ಕಂಡ ಅತ್ಯಂತ ಶ್ರೇಷ್ಠ ಕವಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ತೀರ್ಮಾನ ಮಾಡಿದ್ದೇವೆ. ನಾಡ ಗೀತೆಯನ್ನು ರಚಿಸಿದ ಕವಿ ಕುವೆಂಪು ಅವರು. ಅವರು ಹೆಸರು ಅಂತಿಮಗೊಳಿಸಲು ಅಧಿವೇಶನದಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗುವುದು ಮತ್ತು ಅದನ್ನು ಕೇಂದ್ರ ಸರ್ಕಾರಕ್ಕೆ ಶೀಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಕುವೆಂಪು ಅವರು ವಿಶ್ವಮಾನವ ಸಂದೇಶವನ್ನು ಬರವಣಿಗೆ ಮೂಲಕ ಸಾರಿದ್ದರು. ಅದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರು ಶ್ರಮಿಸುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಸುದೈವ ಕುಟುಂಬಕಂ ತತ್ವ ಸಾರುವ ಕಾರ್ಯ ಮಾಡುತ್ತಿದ್ದಾರೆ.

Airport Name: BS Yediyurappa finalized the name of Shivamogga airport.

ಇದೇ ಫೆಬ್ರವರಿ 27ರಂದು ನರೇಂದ್ರ ಮೋದಿಯವರು ಶಿವಮೊಗ್ಗ ಕ್ಕೆ ಭೇಟಿ ನೀಡಲಿದ್ದಾರೆ. ಅಂದೇ ಇಲ್ಲಿನ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗುವುದು ಬಹುತೇಕ ಖಚಿತವಾಗಿದೆ. ಅಂದು ಪ್ರಧಾನಿ ಮೋದಿ ಅವರೇ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಘೋಷಣೇ ಮಾಡಬೇಕು ಎಂದು ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಸ್ಥಳಿಯ ನಾಯಕರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+