• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯದಲ್ಲೇ ಮೊದಲು; ಭದ್ರಾವತಿಯಲ್ಲಿ ಆರ್‌ಎಎಫ್‌ ಘಟಕ ಸ್ಥಾಪನೆ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಜನವರಿ 12: ಕರ್ನಾಟಕದ ಮೊದಲ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ಘಟಕ ಸ್ಥಾಪನೆಗೆ ಜನವರಿ 16ರಂದು ಶಂಕು ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

" ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕ ಸ್ಥಾಪನೆಯಾಗಲಿದೆ. ಶಂಕು ಸ್ಥಾಪನೆ ಸಮಾರಂಭ ಜನವರಿ 17ರ ಬದಲಾಗಿ ಜನವರಿ 16ರಂದೇ ನಡೆಯಲಿದೆ" ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: 10 ಲಕ್ಷ ರೂ. ಅಧಿಕ ಮೌಲ್ಯದ ಆಭರಣ ವಶ

ಮಂಗಳವಾರ ಅವರು ಶಂಕು ಸ್ಥಾಪನಾ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. "ಜನವರಿ 16ರಂದು ಮಧ್ಯಾಹ್ನ 12.30ಕ್ಕೆ ಭೂಮಿ ಪೂಜೆ ನಡೆಯಲಿದ್ದು, 1 ಗಂಟೆಯಿಂದ ವೇದಿಕೆ ಕಾರ್ಯಕ್ರಮ ನಡೆಯಲಿದೆ" ಎಂದರು.

ಶಿವಮೊಗ್ಗ: ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಭದ್ರಾವತಿ ತಹಶೀಲ್ದಾರ ಅಮಾನತ್ತು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಭದ್ರಾವತಿ ಎಂಪಿಎಂ ಖಾಸಗೀಕರಣ; ಸರ್ಕಾರದಿಂದ ಟೆಂಡರ್ ಆಹ್ವಾನ

ಕಾರ್ಯಕ್ರಮದಲ್ಲಿ 10 ಸಾವಿರ ಮಂದಿ ಸೇರುವ ನಿರೀಕ್ಷೆಯಿದ್ದು, ಎಲ್ಇಡಿ ಸ್ಕೀನ್‌ಗಳನ್ನು ಅಳವಡಿಸಲಾಗುತ್ತದೆ. ಈಗಾಗಲೇ ಆರ್‌ಎಎಫ್ ಪಡೆಗಳು ನಗರಕ್ಕೆ ಆಗಮಿಸಿದ್ದು, ಜನವರಿ 16ರಂದು ಕಾರ್ಯಕ್ರಮವಾದ ನಂತರ ನಿರ್ಮಾಣ ಕಾರ್ಯ ಆರಂಭವಾಗಲಿದೆ.

"ಈ ಪಡೆಗಳು ಭದ್ರತೆ ಮಾತ್ರವಲ್ಲದೇ ಸಾಮಾಜಿಕ ಸೇವಾ ಕಾರ್ಯದಲ್ಲೂ ಸಹ ತೊಡಗಿಸಿಕೊಳ್ಳಲಿವೆ. ಆರ್‌ಎಎಫ್ ಘಟಕ ಭದ್ರಾವತಿಯಲ್ಲಿ ನಿರ್ಮಾಣವಾಗುತ್ತಿರುವುದು ಜಿಲ್ಲೆಗೇ ಹೆಮ್ಮೆಯ ಸಂಗತಿ. ಇದು ಮುಂದಿನ ದಿನಗಳಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ" ಎಂದು ಬಿ. ವೈ. ರಾಘವೇಂದ್ರ ಹೇಳಿದರು.

English summary
Union home minister Amit Shah will lay foundation stone for Rapid Action Force unit in Bhadravathi, Shivamogga on January 16, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X