ಯಡಿಯೂರಪ್ಪ ಪರ ಅನಂತ್ ಕುಮಾರ್ ಪ್ರಚಾರ
ಶಿವಮೊಗ್ಗ, ಏ. 11 : ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ರಂಗು ಪಡೆದುಕೊಂಡಿದೆ. ಶುಕ್ರವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಮತ್ತು ಬಿಎಸ್ ಯಡಿಯೂರಪ್ಪ ಒಟ್ಟಾಗಿ ನಗರದಲ್ಲಿ ರೋಡ್ ಶೋ ನಡೆಸಿದರು.
ಶುಕ್ರವಾರ ಅನಂತ್ ಕುಮಾರ್, ಕೆಎಸ್ ಈಶ್ವರಪ್ಪ ಮತ್ತು ಬಿಎಸ್ ಯಡಿಯೂರಪ್ಪ ಶಿವಮೊಗ್ಗ ನಗರದಲ್ಲಿ ಒಟ್ಟಾಗಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು. ವಿಧಾನ ಪರಿಷತ್ ಸದಸ್ಯೆ ತಾರಾ ಮುಂತಾದವರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು. [ಬಿಎಸ್ ಯಡಿಯೂರಪ್ಪ ಸಂದರ್ಶನ ಓದಿ]
ರೋಡ್ ಶೋ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಕೇಂದ್ರ ಚುನಾವಣಾ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡುವುದು ಒಳ್ಳೆಯದು ಎಂದು ಹೇಳಿದರು. ಚಿತ್ರಗಳಲ್ಲಿ ನೋಡಿ ಮೂವರು ನಾಯಕರ ರೋಡ್ ಶೋ

ಮೂವರು ನಾಯಕರ ರೋಡ್ ಶೋ
ಶಿವಮೊಗ್ಗದಲ್ಲಿ ನಗರದಲ್ಲಿ ಶುಕ್ರವಾರ ಅನಂತ್ ಕುಮಾರ್, ಕೆಎಸ್ ಈಶ್ವರಪ್ಪ ಮತ್ತು ಬಿಎಸ್ ಯಡಿಯೂರಪ್ಪ ಒಟ್ಟಾಗಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು. ನೂರಾರು ಕಾರ್ಯಕರ್ತರು ಈ ಸಮಯದಲ್ಲಿ ಬೈಕ್ ಜಾಥಾ ನಡೆಸುವ ಮೂಲಕ ಪ್ರಚಾರದ ರಂಗನ್ನು ಹೆಚ್ಚಿಸಿದರು.

ಪ್ರಚಾರಕ್ಕೆ ತಾರಾಮೆರಗು
ಶಿವಮೊಗ್ಗ ನಗರದಲ್ಲಿ ಇಂದು ನಡೆದ ರೋಡ್ ಶೋಗೆ ತಾರಾ ಮೆರಗು ಸಿಕ್ಕಿತ್ತು. ವಿಧಾನಪರಿಷತ್ ಸದಸ್ಯೆ ಮತ್ತು ನಟಿ ತಾರಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಅನೇಕ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಕ್ಷಮೆ ಕೇಳಬೇಕು
ನರೇಂದ್ರ ಮೋದಿ ಅವರ ಬಗ್ಗೆ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಕೇಂದ್ರ ಚುನಾವಣಾ ಆಯೋಗವೇ ಛೀಮಾರಿ ಹಾಕಿದೆ. ಮುಖ್ಯಮಂತ್ರಿಯೊಬ್ಬರು ಮೊದಲ ಬಾರಿಗೆ ಛೀಮಾರಿ ಹಾಕಿಸಿಕೊಂಡಿದ್ದಾರೆ. ಇನ್ನಾದರೂ ಸಿಎಂ ಜನರ ಕ್ಷಮೆ ಕೇಳಬೇಕು ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

ಕಾಂಗ್ರೆಸ್ ಸಂಸ್ಕೃತಿಗೆ ನಿದರ್ಶನ
ನರೇಂದ್ರ ಮೋದಿ ಅವರ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡುತ್ತಿದ್ದಾರೆ. ಚುನಾವಣಾ ಆಯೋಗ ಸದ್ಯ ಅದಕ್ಕೆ ತಡೆ ನೀಡಿದೆ. ಲಘುವಾಗಿ ಮಾತನಾಡುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಅನಂತ್ ಕುಮಾರ್ ಹೇಳಿದರು. ನರೇಂದ್ರ ಮೋದಿ ಅವರ ಪರವಾದ ಅಲೆ ಇದೆ ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲದ ಕಾಂಗ್ರೆಸ್ ನಾಯಕರು ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಅನಂತ್ ಕುಮಾರ್ ಆರೋಪಿಸಿದರು.












Click it and Unblock the Notifications