ಅವಧಿಗೂ ಮೊದಲೇ ಅಂಜನಾಪುರ ಜಲಾಶಯ ಭರ್ತಿ

ಶಿವಮೊಗ್ಗ, ಜುಲೈ 04; ಈ ಬಾರಿ ಅವಧಿಗೆ ಮೊದಲೇ ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಪ್ರವಾಸಿಗರನ್ನು ಬರ ಸೆಳೆಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು ಕೋಡಿ ಬಿದ್ದಿದೆ. ಗೇಟುಗಳ ಮೂಲಕ ನೀರು ಹೊರಗೆ ಹೋಗುತ್ತಿದೆ. ಶುಕ್ರವಾರವೇ ಈ ಜಲಾಶಯ ಕೋಡಿ ಬಿದ್ದಿದೆ.

ಕಳೆದೊಂದು ವಾರದಿಂದ ಶಿಕಾರಿಪುರದಲ್ಲಿ ಮಳೆ ಕಡಿಮೆಯಾಗಿದೆ. ಆದರೂ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ಶಿವಮೊಗ್ಗ, ಹುಂಚ, ರಿಪ್ಪನ್ಪೇಟೆ, ತೀರ್ಥಹಳ್ಳಿ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಅಂಜನಾಪುರಕ್ಕೆ ನೀರು ಹರಿದು ಬರುತ್ತಿದೆ.

Anjanapura Reservoir In Shikaripura Is Full

ವಾಡಿಕೆಗೂ ಮೊದಲೇ ಭರ್ತಿ; ಅಂಜನಾಪುರ ಜಲಾಶಯ ಈ ಬಾರಿ ವಾಡಿಕೆಗಿಂತಲೂ ಮೊದಲೇ ಭರ್ತಿಯಾಗಿದೆ. ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಭರ್ತಿಯಾಗುತ್ತಿತ್ತು. ಕಳೆದ ವರ್ಷ ಆಗಸ್ಟ್‌ನಲ್ಲಿ ತುಂಬಿತ್ತು. ಈ ಬಾರಿ ಜುಲೈ ಮೊದಲ ವಾರದಲ್ಲೇ ತುಂಬಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕೃಷಿ, ಕುಡಿಯುವ ನೀರಿನ ಮೂಲ; ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೇ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,732 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ; ಮೈಸೂರು ಮಹಾರಾಜರು 1936ರಲ್ಲಿ ಅಂಜನಾಪುರ ಜಲಾಶಯವನ್ನು ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 21 ಅಡಿ ಎತ್ತರವಿದೆ.

ಇನ್ನು, ಅಂಜನಾಪುರ ಜಲಾಶಯದ ಒಳಹರಿವು ಹೆಚ್ಚಳವಾದ ಸುದ್ದಿ ತಿಳಿಯುತ್ತಿದ್ದಂತೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಪಕ್ಕದಲ್ಲಿ ರಾಕ್ ಗಾರ್ಡನ್ ಇರುವುದರಿಂದ ಪ್ರವಾಸಿಗರು ಸಮಯ ಕಳೆಯಲು ಇಲ್ಲಿ ಅವಕಾಶವಿದೆ.

ಕಳೆದ ಭಾನುವಾರ ಸುಮಾರು 600 ಪ್ರವಾಸಿಗರು ಭೇಟಿ ನೀಡಿದ್ದರು. ಈ ಭಾರಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+