ಶಿವಮೊಗ್ಗ; ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ, ನವೆಂಬರ್ 04; ಶಿವಮೊಗ್ಗದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 57,600 ರೂ. ಗಳ ವೇತನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಪಶುವೈದ್ಯಕೀಯ ಮಹಾವಿದ್ಯಾಲಯವು ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ ವಿಭಾಗದಲ್ಲಿ ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣಶಾಸ್ತ್ರ ವಿಭಾಗದಲ್ಲಿರುವ ತಲಾ ಒಂದು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 7ರಂದು ಬೆಳಗ್ಗೆ 11ಗಂಟೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳು ಸಂಬಂಧಪಟ್ಟ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ, ಜಾನುವಾರು ಸಾಕಾಣಿಕಾ ಸಂಕೀರ್ಣ ಅಥವಾ ಇನ್ಯಾವುದೇ ಘಟಕಗಳಲ್ಲಿ ಪೂರ್ಣಕಾಲಿಕವಾಗಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.
ನೇಮಕಾತಿಯಲ್ಲಿ ಭಾಗವಹಿಸಲಿಚ್ಚಿಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಭಾರತೀಯ ಪಶುವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳಿಂದ ಪಶುವೈದ್ಯಕೀಯ ಅಥವಾ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಅಡಿಯಲ್ಲಿ ಬರುವ ಸಂಸ್ಥೆಗಳಿಂದ ಪದವಿ ಪಡೆದಿರಬೇಕು.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಸ್ವ-ವಿವರವನ್ನು ಭರ್ತಿ ಮಾಡಿ ಅರ್ಹತಾ ದಾಖಲೆಗಳನ್ನು ಸಂದರ್ಶನದ ಸಂದರ್ಭದಲ್ಲಿ ಸಲ್ಲಿಸಬೇಕು. ಸಂದರ್ಶನ ದಿನದಂದು ಬೆಳಗ್ಗೆ 10ಗಂಟೆಯೊಳಗಾಗಿ ಸ್ಥಳದಲ್ಲಿ ಹಾಜರಿದ್ದು, ಹೆಸರು ನೋಂದಾಯಿಸಿಕೊಳ್ಳಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್‌ರನ್ನು ಸಂಪರ್ಕಿಸಬಹುದಾಗಿದೆ. ಕರೆ ಮಾಡಲು ದೂರವಾಣಿ ಸಂಖ್ಯೆ 08182-200872.
ಮಿನಿ ಉದ್ಯೋಗ ಮೇಳ; ದಾವಣಗೆರೆ ವೃತ್ತಿ ಮಾರ್ಗದರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವಂಬರ್ 5ರ ಬೆಳಗ್ಗೆ 10 ಗಂಟೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿನ ಕೊಠಡಿ ಸಂಖ್ಯೆ-51ರ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ/ ಬಿಬಿಎಂ, ಬಿಸಿಎ ಪದವಿ ಪಡೆದವರು ಮಿನಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.
ಪದವಿ ಪಡೆದ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 08192-259446, 6361550016 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications