Arecanut Price Today: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ: ಇಲ್ಲಿದೆ ಫೆಬ್ರವರಿ 26ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಫೆಬ್ರವರಿ 26) ಯಾವ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕು ಎಂದು ನಿರ್ಧರಿಸುತ್ತಾರೆ. ಯಾಕಂದ್ರೆ, ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ, ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಎಲ್ಲಿ ಹಾಗೂ ಯಾವ ಅಡಿಕೆ ದಾರಣೆ ಎಷ್ಟಿದೆ ಎಂದು ಇಲ್ಲಿ ಕಣ್ಣಾಡಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 57,700 ರೂಪಾಯಿ
* ಗರಿಷ್ಠ - 95,310 ರೂಪಾಯಿ
ಶಿವಮೊಗ್ಗದಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,810 ರೂಪಾಯಿ
* ಗರಿಷ್ಠ - 6,6200 ರೂಪಾಯಿ
ಶಿವಮೊಗ್ಗದಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,109 ರೂಪಾಯಿ
* ಗರಿಷ್ಠ - 58,109 ರೂಪಾಯಿ
ಶಿವಮೊಗ್ಗದಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,900 ರೂಪಾಯಿ
* ಗರಿಷ್ಠ - 43,069 ರೂಪಾಯಿ
ಭದ್ರಾವತಿಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 27,700 ರೂಪಾಯಿ
* ಗರಿಷ್ಠ - 27,778 ರೂಪಾಯಿ
ಭದ್ರಾವತಿಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 11,000 ರೂಪಾಯಿ
* ಗರಿಷ್ಠ - 13,000 ರೂಪಾಯಿ
ನಿನ್ನೆ ಬುಧವಾರ ಎಲ್ಲಿ ಯಾವ ಅಡಿಕೆ ಧಾರಣೆ ಎಷ್ಟಿತ್ತು?
ಸಾಗರದಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 15,129 ರೂಪಾಯಿ
* ಗರಿಷ್ಠ - 39,419 ರೂಪಾಯಿ
ಸಾಗರದಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 13,127 ರೂಪಾಯಿ
* ಗರಿಷ್ಠ - 36,599 ರೂಪಾಯಿ
ಸಾಗರದಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 23,189 ರೂಪಾಯಿ
* ಗರಿಷ್ಠ - 45,399 ರೂಪಾಯಿ
ಸಾಗರದಲ್ಲಿ ಬಿಳೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 12,105 ರೂಪಾಯಿ
* ಗರಿಷ್ಠ - 37,666 ರೂಪಾಯಿ
ಸಾಗರದಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,109 ರೂಪಾಯಿ
* ಗರಿಷ್ಠ - 56,333 ರೂಪಾಯಿ
ಸಾಗರದಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 8,599 ರೂಪಾಯಿ
* ಗರಿಷ್ಠ - 24,999 ರೂಪಾಯಿ
ಕಳೆದ ಕೆಲ ದಿನಗಳಿಂದ ಕೆಲವೆಡೆ ಅಡಿಕೆ ಧಾರಣೆ ಇಳಿಕೆಯತ್ತ ಹೊರಟಿದ್ದು, ಬಳಿಕೆ ತುಸು ಏರಿಕೆಯಾಗಿ ಇದೀಗ ಮತ್ತೆ ಆಡಿದ್ದೇ ಆಟ ಎಂಬಂತೆ ಇಳಿಮುಖ ಮಾಡಿದೆ. ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ಇನ್ನೇನು ಇದೀಗ ಬೇಸಿಗೆ ಆರಂಭದ ಸಮಯವಾಗಿದ್ದು, ಗಿಡಗಳನ್ನು ರಕ್ಷಣೆ ಮಾಡುವುದೇ ದೊಡ್ಡ ಸವಾಲಾಗಿದೆ. ಈಗಾಗಲೇ ಬಹುತೇಕ ಭಾಗಗಳಲ್ಲಿ ರಕ್ಷಣೆ ದಾರಿಯನ್ನು ಕಂಡುಕೊಂಡಿದ್ದು, ಪ್ರತಿ ಗಿಡಕ್ಕೂ ಸುಣ್ಣ ಬಳಿದು ಗರಿ ಕಟ್ಟುವ ಕೆಲಸವನ್ನು ಮುಂದುವರೆಸಿದ್ದಾರೆ. ಇಲ್ಲದಿದ್ದರೆ, ಸೂರ್ಯನ ಶಾಖಕ್ಕೆ ಬುಡದಲ್ಲಿ ಬಿರುಕು ಬಿಟ್ಟು ಹಾಳಾಗುವ ಸಾಧ್ಯತೆ ಇರುತ್ತದೆ.












Click it and Unblock the Notifications