Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಮಾರ್ಚ್ 23) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ, ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ, ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ, ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 62,000 ರೂಪಾಯಿ
* ಗರಿಷ್ಠ - 98,796 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 65,030 ರೂಪಾಯಿ
* ಗರಿಷ್ಠ - 65,030 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,399 ರೂಪಾಯಿ
* ಗರಿಷ್ಠ - 54,399 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,010 ರೂಪಾಯಿ
* ಗರಿಷ್ಠ - 35,399 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 26,091 ರೂಪಾಯಿ
* ಗರಿಷ್ಠ - 29,500 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 54,300 ರೂಪಾಯಿ
* ಗರಿಷ್ಠ - 81,740 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,199 ರೂಪಾಯಿ
* ಗರಿಷ್ಠ - 56509 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,109 ರೂಪಾಯಿ
* ಗರಿಷ್ಠ - 37,089 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪಿಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 12,500 ರೂಪಾಯಿ
* ಗರಿಷ್ಠ - 12,500 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 41,199 ರೂಪಾಯಿ
* ಗರಿಷ್ಠ - 54,069 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 12,000 ರೂಪಾಯಿ
* ಗರಿಷ್ಠ - 12,000 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ಚೂರು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 15,000 ರೂಪಾಯಿ
* ಗರಿಷ್ಠ - 15,000 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,089 ರೂಪಾಯಿ
* ಗರಿಷ್ಠ - 54,089 ರೂಪಾಯಿ
ಇನ್ನೇನು ಇದೀಗ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ಸಮಯದಲ್ಲಿ ಗಿಡಗಳನ್ನು ರಕ್ಷಣೆ ಮಾಡುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಈಗಾಗಲೇ ಬಹುತೇಕ ಭಾಗಗಳಲ್ಲಿ ರಕ್ಷಣೆ ದಾರಿಯನ್ನು ಕಂಡುಕೊಂಡಿದ್ದು, ಪ್ರತಿ ಗಿಡಕ್ಕೂ ಸುಣ್ಣ ಬಳಿದು ಗರಿ ಕಟ್ಟುತ್ತಿದ್ದಾರೆ. ಇಲ್ಲದಿದ್ದರೆ, ಸೂರ್ಯನ ಶಾಖಕ್ಕೆ ಬುಡದಲ್ಲಿ ಬಿರುಕು ಬಿಟ್ಟು ಗಿಡ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈಗಾಗಲೇ ಕೆಲವೆಡೆ ಈ ಕ್ರಮ ಅನುಸರಿಸದವರ ತೋಟಗಳಲ್ಲಿ ಬೆಳೆ ನಾಶವಾದ ಘಟನೆಗಳು ನಡೆದಿವೆ.












Click it and Unblock the Notifications