ಶಿವಮೊಗ್ಗ: ಗಾಂಜಾ ಸಾಗಣೆ ಮಾಡುತ್ತಿದ್ದವರ ಬಂಧನ, 2 ಪ್ರತ್ಯೇಕ ಅಪಘಾತ
ಶಿವಮೊಗ್ಗ, ಆಗಸ್ಟ್ 26: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಣೆ ಮಾಡುತ್ತಿದ್ದವರ ಮೇಲೆ ಭದ್ರಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿ, ಒಂದು ಕಾರು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿಯ ಪೇಪರ್ ಟೌನ್ ಕಡೆಯಿಂದ ಕೂಲಿ ಬ್ಲಾಕ್ ಶೆಡ್ ಕಡೆಗೆ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 11.44 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 1.30 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಗಾಂಜಾ ಸಾಗಿಸುತ್ತಿದ್ದ ಡ್ಯಾನಿಯಲ್ ಅಲಿಯಾಸ್ ಡ್ಯಾನಿ, ಚರಣ ಅಲಿಯಾಸ್ ಕುರಚರಣ ರಾಜ್ ಯಾದವ್, ಆದಿಲ್ ಬಾಷಾ ಎಂಬುವವರನ್ನು ಬಂಧಿಸಲಾಗಿದೆ. 1.50 ಲಕ್ಷ ರೂ. ಮೌಲ್ಯದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಾಯಿಲ್ ಬಾಗ್ಲಾ, ಭದ್ರಾವತಿ ನಗರ ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಸಿಬ್ಬಂದಿಗಳಾದ ವಂಕಟೇಶ್, ಮಂಜುನಾಥ್, ಅಶೋಕ್, ಸುನಿಲ್ ಕುಮಾರ್, ಪಾಲಾಕ್ಷನಾಯ್ಕ, ಮಲ್ಲಿಕಾರ್ಜುನ, ಕುಮಾರ್ ದಾಳಿಯಲ್ಲಿ ಭಾಗವಹಿಸಿದ್ದರು. ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಭೀಕರ ಅಪಘಾತ, ಸೀಟ್‌ನಲ್ಲೇ ಸಿಕ್ಕಿಬಿದ್ದು ಚಾಲಕ ಸಾವು
ಎರಡು ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿರುವುದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.
ಭದ್ರಾವತಿಯ ಬಾರಂದೂರು ಸಮೀಪ ಟಾಟಾ ಸುಮೋ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಓಮ್ನಿ ಕಾರು ಚಾಲಕ ಮಂಜುನಾಥ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಹೇಗಾಯ್ತು ಅಪಘಾತ?
ಗೃಹೋಪಯೋಗಿ ವಸ್ತುಗಳ ಮಾರಾಟಕ್ಕಾಗಿ ಮಂಜುನಾಥ್ ಮತ್ತು ಅಫ್ಜಲ್ ಓಮ್ನಿ ಕಾರಿನಲ್ಲಿ ಭದ್ರಾವತಿಯಿಂದ ತರೀಕೆರೆ ಕಡೆಗೆ ತೆರಳುತ್ತಿದ್ದರು. ಬಾರಂದೂರು ಬಳಿ ಎದುರಿನಿಂದ ಬಂದ ಟಾಟಾ ಸುಮೋ ಕಾರು, ಓಮ್ನಿ ಕಾರಿಗೆ ಡಿಕ್ಕಿಯಾಗಿದೆ.
ಓಮ್ನಿ ಕಾರಿನ ಬಲ ಭಾಗಕ್ಕೆ ಗುದ್ದಿದ ಟಾಟಾ ಸುಮೋ ಕಾರು, ರಸ್ತೆಯಿಂದ ಪಕ್ಕಕ್ಕೆ ಹೋಗಿ ತಿರುಗಿ ನಿಂತಿದೆ. ಇತ್ತ ಓಮ್ನಿ ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಾಲಕ ಮಂಜುನಾಥ್ ಗಂಭೀರವಾಗಿ ಗಾಯಗೊಂಡು ಕಾರಿನಲ್ಲೇ ಸಿಲುಕಿ ಮೃತಪಟ್ಟಿದ್ದಾನೆ.
ಓಮ್ನಿ ಕಾರಿನಲ್ಲಿದ್ದ ಅಫ್ಜಲ್, ಟಾಟಾ ಸುಮೋ ಚಾಲಕ ಸುಬ್ರಹ್ಮಣ್ಯ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರಿಗೆ ಗಾಯವಾಗಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪಾದಚಾರಿಗೆ ಹಿಂದಿನಿಂದ ಗುದ್ದಿದ ವಾಹನ
ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ವಾಹನವೊಂದು ಗುದ್ದಿದೆ. ಅಪಘಾತದಲ್ಲಿ ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿ ತಾಲೂಕು ಕಾರೇಹಳ್ಳಿ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯೇಸುದಾಸ್‌ಗೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆ, ಕಾಲಿಗೆ ಗಾಯವಾಗಿದೆ.
ವಾಹನ ನಿಲ್ಲಿಸದೆ ಪರಾರಿ
ಯೇಸುದಾಸ್‌ಗೆ ಗುದ್ದಿದ ವಾಹನ ಸ್ಥಳದಿಂದ ಪರಾರಿಯಾಗಿದೆ. ವಾಹನ ಚಾಲಕ ಯೇಸುದಾಸ್ ಪರಿಸ್ಥಿತಿಯನ್ನು ಗಮನಿಸದೆ, ಅವರು ರಸ್ತೆ ಮೇಲೆ ಬಿದ್ದಿದ್ದರೂ ಎಸ್ಕೇಪ್ ಆಗಿದ್ದಾರೆ. ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications