• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಲ್ಲೆ ಪ್ರಕರಣ: ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರನ ಬಂಧನ

|
Google Oneindia Kannada News

ಶಿವಮೊಗ್ಗ, ಮಾರ್ಚ್ 6: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಅವರನ್ನು ಚಿತ್ರದುರ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಭದ್ರಾವತಿಯಲ್ಲಿ ಕಳೆದ ಫೆ.28ರ ರಾತ್ರಿ ನಡೆದ ಗಲಾಟೆ ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಚಿತ್ರದುರ್ಗದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಭದ್ರಾವತಿ ಗಲಭೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಭದ್ರಾವತಿ ಗಲಭೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಫೆ.28ರ ರಾತ್ರಿ ಭದ್ರಾವತಿಯಲ್ಲಿ ನಡೆದ ಪ್ರೊ ಕಬ್ಬಡ್ಡಿ ಪಂದ್ಯಾವಳಿ ವೇಳೇಯಲ್ಲಿ ಪಂದ್ಯದಲ್ಲಿ ರನ್ನರ್​ ಅಪ್​ ಆಗಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ತಂಡ ಜೈ ಶ್ರೀರಾಮ್ ಎಂದು ಘೋಷಣೆ ಹಾಕಿದ್ದರು.

ಇದರಿಂದ ಸಿಟ್ಟಾಗಿದ್ದ ಶಾಸಕ ಸಂಗಮೇಶ್ವರ್ ಪುತ್ರ, ಸಹೋದರನ ಪುತ್ರರಿಂದ ತಂಡದ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಶಾಸಕ ಸಂಗಮೇಶ್ವರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಭದ್ರಾವತಿಯಲ್ಲಿ ನಿಷೇಧಾಜ್ಞೆ; ಬಂಧನದ ಬಗ್ಗೆ ಶಾಸಕರ ಸ್ಪಷ್ಟನೆಭದ್ರಾವತಿಯಲ್ಲಿ ನಿಷೇಧಾಜ್ಞೆ; ಬಂಧನದ ಬಗ್ಗೆ ಶಾಸಕರ ಸ್ಪಷ್ಟನೆ

ಘಟನೆ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಕೊಲೆ ಬೆದರಿಕೆ, ಜಾತಿ ನಿಂದನೆ ಕೇಸ್​ನಲ್ಲಿ ಬಸವೇಶ್ A-4 ಆರೋಪಿಯಾಗಿದ್ದು, ಈ ಪ್ರಕರಣ ಸಂಬಂಧ ಈತನಕ ಸುಮಾರು 15 ಮಂದಿಯನ್ನು ಬಂಧಿಸಲಾಗಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಸವೇಶ್ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

English summary
Basavesh, son of Shivamogga district Bhadravathi MLA BK Sangameshwar, has been arrested by the police in Chitradurga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X