ತಂದೆಯಿಂದಲೇ ಮಗುವಿನ ಮೇಲೆ ಹಲ್ಲೆ: ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ

ಶಿವಮೊಗ್ಗ, ಫೆಬ್ರವರಿ 17: ಕುಡಿದ‌ ಅಮಲಿನಲ್ಲಿದ್ದ ತಂದೆಯೇ ಒಂದೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಿದ್ದರಿಂದಾಗಿ ಕೋಮಾ ಸ್ಥಿತಿ ತಲುಪಿದ ಮಗು, ಝೀರೋ ಟ್ರಾಫಿಕ್ ಮೂಲಕ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ಕರೆತರಲಾಗಿದೆ.

ಒಂದೂವರೆ ವರ್ಷದ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.

ಕುಡಿದ ಅಮಲಿನಲ್ಲಿದ್ದ ತಂದೆಯು ತನ್ನ ಒಂದೂವರೆ ವರ್ಷದ ಹೆಣ್ಣು ಮಗುವಿನ ತಲೆ‌ಗೆ ಕತ್ತಿಯಿಂದ ಹಲ್ಲೆ‌ ನಡೆಸಿದ ಘಟನೆ ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ.

Assault On Child By Father In Kaduru

ಮಗುವಿನ ತಲೆಗೆ ಪೆಟ್ಟು ಬಿದ್ದ ತಕ್ಷಣ ಗಂಭೀರ ಗಾಯವಾಗಿ ಕೋಮಾ ಸ್ಥಿತಿಗೆ ತಲುಪಿದ್ದು, ಕಡೂರಿನ ಜೀಸನ್ ಹಾಗೂ ಹಾಜಿರಾ ದಂಪತಿ ಪುತ್ರಿ ಮೀರನ್ ನಾಜ್ ಎನ್ನಲಾಗಿದೆ.

Assault On Child By Father In Kaduru

ಮಗುವನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆ ವೈದ್ಯರು ಮಗುವನ್ನು ಬೆಂಗಳೂರಿನ‌ ನಿಮಾನ್ಸ್ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕಳುಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+