Shivamogga: 2 ಬಸ್‌ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು, 6 ಮಂದಿಗೆ ಗಂಭೀರ ಗಾಯ
ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚೋರಡಿ ಬಳಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರ ಎಂದು ವರದಿಯಾಗಿದೆ.
ಎರಡು ಖಾಸಗಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ ಎಂದ ವರದಿಯಾಗಿದೆ. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಮತ್ತು ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಬಿ ವೈ ವಿಜಯೇಂದ್ರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಇಂತಹ ದುರ್ಘಟನೆ ನಡೆಯಬಾರದಿತ್ತು, ಮತದಾನಕ್ಕೆ ಬಂದಿರುವವರು ಕೂಡ ಬಸ್‌ನಲ್ಲಿ ಇದ್ದರು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂರು-ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದರು. ಬಿಎಸ್ ಯಡಿಯೂರಪ್ಪ ಕೂಡ ದೂರವಾಣಿ ಮೂಲಕ ವೈದ್ಯರ ಜೊತೆ ಮಾತನಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ" ಎಂದು ಹೇಳಿದರು.
ಬಿ ವೈ ರಾಘವೇಂದ್ರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿ, "ಶಿವಮೊಗ್ಗ ಮತ್ತು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕುಮುದ್ವತಿ ಸೇತುವೆ ಬಳಿ ಅಪಘಾತ ನಡೆದಿದೆ. ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಮೃತಪಟ್ಟಿದ್ದು, 3 ರಿಂದ 4 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಜನಕ್ಕೆ ಹೆಚ್ಚಿನ ಗಾಯಗಳಾಗಿಲ್ಲ, ಎಲ್ಲರಿಗೂ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ."
ಡ್ರೈವರ್ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದದ್ದೇ ಘಟನೆಗೆ ಕಾರಣ ಎಂದು ಕೆಲವರು ಹೇಳಿದ್ದು, ಇನ್ನೂ ಕೆಲವರು ಅತಿಯಾದ ವೇಗವಾಗಿ ಹೋಗುವಾಗ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಇನ್ನೂ ಕೆಲವರು ಹೇಳಿದ್ದಾರೆ.












Click it and Unblock the Notifications