ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ರೈಲು ತಡೆಗೆ ಯತ್ನ, ರೈಲ್ವೆ ನಿಲ್ದಾಣದ ಮುಂದೆ ಹೈಡ್ರಾಮಾ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 24: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ರೈಲು ತಡೆಗೆ ಮುಂದಾದರು.

ತೈಲೋತ್ಪನ್ನಗಳ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳು ದರವು ಗಗನ ಮುಟ್ಟಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

''ಮೋದಿ ಪ್ರಧಾನಿಯಾಗಿ ಮುಂದುವರೆದರೆ 10 ಕೋಟಿ ಜನ ಆತ್ಮಹತ್ಯೆ ಮಾಡಿಕೊಳ್ತಾರೆ’’''ಮೋದಿ ಪ್ರಧಾನಿಯಾಗಿ ಮುಂದುವರೆದರೆ 10 ಕೋಟಿ ಜನ ಆತ್ಮಹತ್ಯೆ ಮಾಡಿಕೊಳ್ತಾರೆ’’

ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಗೆ ಮುಂದಾದ ಹಿನ್ನೆಲೆ ರೈಲ್ವೆ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಇದನ್ನು ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಒಳ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ಸಂಭವಿಸಿತು.

Shivamogga: Attempts Rail Roko By Congress Activists In Shivamogga

ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನರು ಬದುಕು ನಡೆಸುವುದೇ ಕಷ್ಟವಾಗಿದೆ. ಅಚ್ಚೇ ದಿನ್ ಅಂತಾ ಹೇಳುತ್ತಾ ಮೋದಿ ಸರ್ಕಾರ ಜನರ ಭವಿಷ್ಯವನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.

Shivamogga: Attempts Rail Roko By Congress Activists In Shivamogga

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ.ಯೋಗೇಶ್, ಕಾರ್ಪೊರೇಟರ್ ರಮೇಶ್ ಹೆಗಡೆ, ಯಮುನಾ ರಂಗೇಗೌಡ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ಪ್ರವೀಣ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

English summary
Congress workers protested in Shivamogga, protesting the rise in petrol, diesel and cooking gas prices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X