ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ
ಶಿವಮೊಗ್ಗ, ಸೆಪ್ಟೆಂಬರ್ 3: ಕ್ಯಾಂಪಸ್ ಒಳಗೆ ಖೇಲೋ ಇಂಡಿಯಾ ಯೋಜನೆ ವಿರೋಧಿಸಿ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆಯುತ್ತಿದೆ. ಶುಕ್ರವಾರದಂದು ಸಹ್ಯಾದ್ರಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಅಲ್ಲದೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಖೇಲೋ ಇಂಡಿಯಾ ಯೋಜನೆ ಅಡಿ ವಿಶೇಷ ಕ್ರೀಡಾ ಸಂಕೀರ್ಣ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಈ ಕ್ರೀಡಾ ಸಂಕೀರ್ಣಕ್ಕೆ ಜಾಗ ನಿಗದಿಪಡಿಸಲಾಗಿದೆ. ಆದರೆ ವಿದ್ಯಾರ್ಥಿಗಳು, ವಿವಿಧ ಸಂಘ- ಸಂಸ್ಥೆಗಳು, ಹಳೆ ವಿದ್ಯಾರ್ಥಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಒಳಗೆ ಈ ಸಂಕೀರ್ಣ ಸ್ಥಾಪಿಸುವುದು ಬೇಡ ಎಂದು ಆಗ್ರಹಿಸಿದ್ದಾರೆ.
ಇವತ್ತು ತರಗತಿಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು. ಕಾಲೇಜು ಮುಂಭಾಗದ MRS ಸರ್ಕಲ್‌ನಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆ ಮಾಡಿದರು. ಅಲ್ಲದೆ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಕ್ರೀಡಾ ಸಂಕೀರ್ಣವನ್ನು ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಬದಲು ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.

ಹೈವೇ ರಸ್ತೆಯಲ್ಲಿ ಮೆರವಣಿಗೆ
ಕೆಲ ಹೊತ್ತು ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಮೆರವಣಿಗೆ ಮಾಡಿದರು. ಕ್ರೀಡಾ ಸಂಕೀರ್ಣವನ್ನು ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಿಂದ ಹೊರಗೆ ಸ್ಥಾಪಿಸುವಂತೆ ಘೋಷಣೆಗಳನ್ನು ಕೂಗಿದರು. ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಬೈಪಾಸ್ ರಸ್ತೆಯಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕಚೇರಿಯ ಗೇಟ್ ಬಂದ್ ಮಾಡಿಸಿದರು. ವಿದ್ಯಾರ್ಥಿಗಳು ಒಳಗೆ ಪ್ರವೇಶ ಪಡೆಯದಂತೆ ತಡೆದರು. ಕೆಲವರು ಗೇಟು ಹಾರಿ ಒಳಗೆ ನುಗ್ಗಲು ಯತ್ನಿಸಿದರು. ಇದರಿಂದ ಕೆಲ ಕ್ಷಣ ನಗರ ಕಚೇರಿ ಮುಂಭಾಗ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತಳ್ಳಾಟವಾಯಿತು.

72 ಕೋಟಿ ರೂ. ವೆಚ್ಚದ ಕ್ರೀಡಾ ಸಂಕೀರ್ಣ
ಶಿವಮೊಗ್ಗದ ಪ್ರತಿಷ್ಠಿತ ಸಹ್ಯಾದ್ರಿ ಕಾಲೇಜಿನಲ್ಲಿ ವಿಶೇಷ ಕ್ರೀಡಾ ಸಂಕೀರ್ಣ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 72 ಕೋಟಿ ರೂ. ವೆಚ್ಚದಲ್ಲಿ ಖೇಲೋ ಇಂಡಿಯಾ ಯೋಜನೆ ಅಡಿ ಈ ಸಂಕೀರ್ಣ ನಿರ್ಮಿಸಲಾಗುತ್ತಿದೆ. ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಇಲ್ಲಿ ತರಬೇತಿ ಕೊಡಲಾಗುತ್ತದೆ. 17 ಎಕರೆ ಪ್ರದೇಶದಲ್ಲಿ ವಿವಿಧ ಕ್ರೀಡಾ ಚಟುವಟಿಕೆಗೆ ಅನುಕೂಲ ಆಗುವಂತಹ ಅಂಗಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಶೈಕ್ಷಣಿಕ ಚುಟುವಟಿಕೆಗೆ ಅನುಕೂಲ
ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಈಗಾಗಲೆ ಸ್ಟೇಡಿಯಂ ಇದೆ. ಶೈಕ್ಷಣಿಕ ಚುಟುವಟಿಕೆಗೆ ಅನುಕೂಲ ಆಗುವ ಮೂಲ ಸೌಕರ್ಯದ ಅವಶ್ಯಕತೆ ಇದೆ. ಇವುಗಳನ್ನು ಸ್ಥಾಪಿಸುವತ್ತ ಸರ್ಕಾರ ಗಮನ ಹರಿಸಬೇಕು. ಕ್ರೀಡಾ ಸಂಕೀರ್ಣ ಸ್ಥಾಪನೆಯಾದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಕ್ರೀಡಾ ಸಂಕೀರ್ಣವನ್ನು ಆಯನೂರಿನಲ್ಲಿ ಖಾಲಿ ಇರುವ 50 ಎಕರೆ ಜಾಗದಲ್ಲಿ ಸ್ಥಾಪಿಸಬೇಕು ಎಂದು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಒತ್ತಾಯವಾಗಿದೆ.

ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ
ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, "ಎಲ್ಲ ಕಾಮಗಾರಿಗಳಿಗೆ ಎಲ್ಲರೂ ಬೆಂಬಲ ನೀಡುತ್ತಾರೆ ಎಂದು ಹೇಳಲಾಗುವುದಿಲ್ಲ. ಕೇಂದ್ರ ಸರ್ಕಾರ ಅನುದಾನ ನೀಡಿದೆ. ರಾಜ್ಯ ಸರ್ಕಾರವೂ ಅನುದಾನ ನೀಡಲಿದೆ. ಕ್ರೀಡಾಪಟುಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಈ ಯೋಜನೆ ಮಂಜೂರು ಮಾಡಿಸಿಕೊಂಡು ಬಂದಿದ್ದಾರೆ. ಎಲ್ಲರ ಒಪ್ಪಿಗೆ ಪಡೆದು ಈ ಯೋಜನೆ ಜಾರಿಗೊಳಿಸಲಾಗುವುದು," ಎಂದು ಸ್ಪಷ್ಟಪಡಿಸಿದ್ದಾರೆ.
ಖೇಲೋ ಇಂಡಿಯಾ ಕ್ರೀಡಾ ಸಂಕೀರ್ಣ ವಿರೋಧಿಸಿ ವಿದ್ಯಾರ್ಥಿಗಳು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದು ಜಿಲ್ಲಾಡಳಿತವನ್ನು ಚಿಂತೆಗೀಡು ಮಾಡಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications