ಶಿವಮೊಗ್ಗ; ಹರ್ಷ ಹಂತಕರನ್ನು ಬಂಧಿಸಲು 3 ತಂಡ ರಚನೆ

ಶಿವಮೊಗ್ಗ, ಫೆಬ್ರವರಿ 20; ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ಫೆಬ್ರವರಿ 23ರ ಮುಂಜಾನೆ ತನಕ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಶಿವಮೊಗ್ಗ ಎಸ್‌ಪಿ ಬಿ. ಎಂ. ಲಕ್ಷ್ಮೀ ಪ್ರಸಾದ್, "ಶಿವಮೊಗ್ಗ ನಗರದಾದ್ಯಂತ ಪೊಲೀಸರ ಬಂದೋಬಸ್ತ್ ಏರ್ಪಡಿಸಲಾಗಿದೆ. ಹರ್ಷನ ಮನೆ ಸುತ್ತ ಆರ್‌ಎಫ್‌ಎ ಸಿಬ್ಬಂದಿ ಕಾವಲು ನಿಯೋಜನೆ ಮಾಡಲಾಗಿದೆ" ಎಂದರು.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಸಿಪಿಐಗಳಾದ ಅಭಿಯ ಪ್ರಕಾಶ್, ಗುರುರಾಜ್, ಸತೀಶ್ ತಂಡ ರಚಿಸಲಾಗಿದೆ. ಭಾನುವಾರ ರಾತ್ರಿ 8.45ರ ಸಮಯದಲ್ಲಿ ಹರ್ಷ (28) ಕೊಲೆಯಾಗಿತ್ತು.

Laxmi Prasad

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, "ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಹಂತದಲ್ಲಿ ಇರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ" ಎಂದು ಹೇಳಿದ್ದಾರೆ.

ಶಿವಮೊಗ್ಗ ನಗರ ಶಾಸಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ, "ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆದಾಗ ಯಾವ ಯಾವ ಸಂಘಟನೆಗಳು, ರಾಷ್ಟ್ರದ್ರೋಹಿ ಶಕ್ತಿಗಳು ಇದರಲ್ಲಿ ಇವೆ ಎಂಬುದು ಹೊರಗಡೆ ಬರುತ್ತದೆ. ಯಾರು ಷಡ್ಯಂತ್ರ ಮಾಡಿದ್ದಾರೆ ಎಂಬುದು ಹೊರಗೆ ಬರಲಿ. ಇದು ವ್ಯವಸ್ಥಿತವಾಗಿ ನಡೆದ ಷಡ್ಯಂತ್ರ" ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಟಣೆ; ಹರ್ಷ ಕೊಲೆ ಪ್ರಕರಣದ ಬಗ್ಗೆ ಪೊಲೀಸರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಬಜರಂಗದಳದ ಕಾರ್ಯಕರ್ತನಾದ ಹರ್ಷ (28), ಕುಂಬಾರ ಬೀದಿ, ಸೀಗೆಹಟ್ಟಿ, ಶಿವಮೊಗ್ಗ ಈತನು ದಿನಾಂಕ 20/2/2022 ರಂದು ರಾತ್ರಿ ಹೋಟೆಲ್‌ಗೆ ಹೋಗಿ ಊಟ ಮಾಡಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾಗ ಯಾರೋ ದುಷ್ಕರ್ಮಿಗಳು ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಎನ್.ಟಿ ರಸ್ತೆ ಕಾಮತ್‌ ಪೆಟ್ರೋಲ್‌ ಬಂಕ್ ಎದುರು ಭಾರತೀ ಕಾಲೋನಿ ಕ್ರಾಸ್‌ನ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ.

ಈ ಕುರಿತ ದೂರಿನ ಮೇರೆಗೆ 0077/2022 ಕಲಂ 302 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ. ಸದರಿ ಪ್ರಕರಣದ ವಿಶೇಷ ತನಿಖಾ ತಂಡವು 21/2/2022 ರಂದು ಆರೋಪಿಗಳಾದ ಖಾಸಿಫ್‌ (30), ಸೈಯ್ಯದ್‌ ನಧೀಂ (20) ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ; ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇಂದು ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬಂದಿದೆ.

ಶಿವಮೊಗ್ಗ ಎಸ್‌ಪಿ ಬಿ. ಎಂ. ಲಕ್ಷ್ಮೀ ಪ್ರಸಾದ್ ಈ ಕುರಿತು ಮಾಹಿತಿ ನೀಡಿದರು, "ಇಂದು ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದೆ. ಬುಧವಾರ ಮುಂಜಾನೆ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ" ಎಂದು ಹೇಳಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಶಾಲಾ, ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ನಗರದಲ್ಲಿ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಬೆಂಗಳೂರಿನಿಂದ ಸಹ ಪೊಲೀಸರನ್ನು ಕರೆಸಿ ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ.

2 ಲಕ್ಷ ಪರಿಹಾರ ಘೋಷಣೆ; ಹತ್ಯೆಯಾದ ಹರ್ಷ ಕುಟುಂಬಕ್ಕೆ ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದು, "ಬಜರಂಗದಳದ ಯುವ ಕಾರ್ಯಕರ್ತ ಹರ್ಷ ರನ್ನು ಕಳೆದುಕೊಂಡಿರುವುದು ನನ್ನ ಮನೆಯ ಮಗನನ್ನು ಕಳೆದುಕೊಂಡಷ್ಟೇ ದುಃಖವಾಗಿದೆ. ಹರ್ಷ ಕುಟುಂಬದ ಜೊತೆ ನಾನು ಸದಾ ಇರುತ್ತೇನೆ, ಈ ಸಂದರ್ಭದಲ್ಲಿ ಹರ್ಷ ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 2,00,000 ರೂ. ನೀಡುತ್ತಿದ್ದೇನೆ. ಹರ್ಷ ಕುಟುಂಬದ ಜೊತೆ ಸಮಸ್ತ ಹಿಂದೂ ಬಂಧುಗಳು ಇದ್ದೇವೆ" ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+