ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹರ್ಷ ಕೊಲೆ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ; ಬಸವರಾಜ ಬೊಮ್ಮಾಯಿ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 23; " ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, "ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ" ಎಂದು ತಿಳಿಸಿದರು.

ಹರ್ಷ ಕೊಲೆ ಪ್ರಕರಣ: ಪೊಲೀಸ್ ಪಾತ್ರದ ಬಗ್ಗೆ ತನಿಖೆ ನಡೆಸಲು ಡಿಜಿಪಿಗೆ ಗೃಹ ಸಚಿವರ ಪತ್ರಹರ್ಷ ಕೊಲೆ ಪ್ರಕರಣ: ಪೊಲೀಸ್ ಪಾತ್ರದ ಬಗ್ಗೆ ತನಿಖೆ ನಡೆಸಲು ಡಿಜಿಪಿಗೆ ಗೃಹ ಸಚಿವರ ಪತ್ರ

ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, "ಕಾಂಗ್ರೆಸ್‌ನವರು ಈ ಹಿಂದೆ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ" ಎಂದರು.

ಶಿವಮೊಗ್ಗ; ಹರ್ಷ ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ಶಿವಮೊಗ್ಗ; ಹರ್ಷ ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ

Bajrang Dal Activist Harsha Murder Next Step After Probe Says CM

ನಗರದಲ್ಲಿ ಶಾಂತಿಯುವ ವಾತಾವರಣ; ಭಾನುವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದಿತ್ತು. ಸೋಮವಾರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಗರದಲ್ಲಿ ಗಲಭೆ ನಡೆದಿತ್ತು. ನಗರದಲ್ಲಿ ಶಾಂತಿ ಕಾಪಾಡಲು ಕರ್ಫ್ಯೂ ಜಾರಿಗೊಳಿಸಲಾಗಿದೆ.

ಹರ್ಷ ಹತ್ಯೆ ಪ್ರಕರಣ; ಬೆಂಗಳೂರಿನಲ್ಲಿ ನಾಲ್ವರ ಬಂಧನ ಹರ್ಷ ಹತ್ಯೆ ಪ್ರಕರಣ; ಬೆಂಗಳೂರಿನಲ್ಲಿ ನಾಲ್ವರ ಬಂಧನ

ಶಿವಮೊಗ್ಗ ನಗರದಲ್ಲಿ ವಾತಾವರಣ ಶಾಂತಿಯುತವಾಗಿದೆ. ಆದರೆ ಪೊಲೀಸರ ಭದ್ರತೆ ಹಾಗೆಯೇ ಇದೆ. ಕರ್ಫ್ಯೂ ಸಹ ಜಾರಿಯಲ್ಲಿದೆ. ಹರ್ಷ ಕೊಲೆ ಪ್ರಕರಣದ ಸಂಬಂಧ ಇದುವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ.

ಶಿವಮೊಗ್ಗ ನಗರದಲ್ಲಿ ಜಾರಿಗೊಳಿಸಿದ್ದ ಕರ್ಫ್ಯೂವನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಕರ್ಫ್ಯೂವನ್ನು ಫೆಬ್ರವರಿ 26ರ ಬೆಳಗ್ಗೆ 9 ಗಂಟೆವರೆಗೂ ವಿಸ್ತರಣೆ ಮಾಡಲಾಗಿದೆ.

ಸೆಕ್ಷನ್ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮೊದಲು ಫೆಬ್ರವರಿ 25ರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿತ್ತು.

ನಳಿನ್ ಕುಮಾರ್ ಕಟೀಲ್ ಭೇಟಿ; ಕರ್ನಾಟಕ ಬಿಜೆಪಿ ಅಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್‍ಕುಮಾರ್ ಕಟೀಲ್ ಬುಧವಾರ ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಶಿವಮೊಗ್ಗ ನಗರ ಶಾಸಕ, ಸಚಿವ ಕೆ. ಎಸ್. ಈಶ್ವರಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಭಾನುಪ್ರಕಾಶ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪ, "ಹಿಂದೂ ಸಂಘಟನೆಯ ಹರ್ಷ ಕಗ್ಗೊಲೆ ಆಗುವ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ಕಗ್ಗೊಲೆ ಆದ ತಕ್ಷಣ ಕೊಲೆಗಡುಕ ಗೂಂಡಾಗಳನ್ನು ರಾಜ್ಯ ಸರ್ಕಾರ ಬಂಧಿಸಿದೆ" ಎಂದರು.

"ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಇಲ್ಲಿಗೆ ಬಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸಹಕಾರದ ಭರವಸೆ ನೀಡಿದ್ದಾರೆ. ಕೊಲೆಗಡುಕರು ಮತ್ತು ಘಟನೆಯ ಹಿಂದಿರುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ" ಎಂದು ಹೇಳಿದರು.

"ರಾಜ್ಯ ಸರಕಾರದಿಂದಲೂ ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ. ಈ ವಿಚಾರದಲ್ಲಿ ಆರೋಪ ಮಾಡಿದವರಿಗೆ ನಿಧಾನಕ್ಕೆ ಉತ್ತರ ಲಭಿಸಲಿದೆ. ಪಕ್ಷ ಮತ್ತು ಸರ್ಕಾರ ಕೈಗೊಳ್ಳುವ ಕ್ರಮ ನಿಧಾನವಾಗಿ ಗೊತ್ತಾಗಲಿದೆ" ಎಂದು ತಿಳಿಸಿದರು.

10 ಲಕ್ಷ ಪರಿಹಾರ ಘೋಷಣೆ; ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 10 ಲಕ್ಷ ರೂ. ನೆರವು ನೀಡುವುದಾಗಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಈ ಕುರಿತು ಫೇಸ್ ಬುಕ್ ಪೋಸ್ಟ್ ಹಾಕಿದರುವ ಅವರು, "ನಮ್ಮ ಸಂಘ ಪರಿವಾರದ ಯುವ ಕಾರ್ಯಕರ್ತ ಹರ್ಷ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ನೋವು ನಮ್ಮೆಲ್ಲರ ನೋವಾಗಿದೆ. ಡಾ. ಅಶ್ವತ್ಥನಾರಾಯಣ ಫೌಂಡೇಷನ್ ವತಿಯಿಂದ ಹರ್ಷ ಅವರ ಕುಟುಂಬಕ್ಕೆ 10,00,000 ರೂ. ನೀಡಲಿದ್ದೇವೆ. ಅವರ ತಾಯಿ ಹಾಗೂ ಕುಟುಂಬದ ಸದಸ್ಯರ ಜತೆ ಮಾತನಾಡಿ ಎಲ್ಲಾ ಸಂಕಷ್ಟಗಳಿಗೆ ಆಸರೆಯಾಗಿ ನಿಲ್ಲುವ ಭರವಸೆ ನೀಡಿದ್ದೇನೆ" ಎಂದು ತಿಳಿಸಿದ್ದಾರೆ.

Recommended Video

ಹರ್ಷ ಅಮರ್ ರಹೇ ಎಂದು ಕೂಗಿದ ಪ್ರತಿಭಟನಾ ಕಾರ್ಯಕರ್ತರು | Oneindia Kannada

English summary
Karnataka chief minister Basavaraj Bommai said that next step will take after probe in Bajrang Dal activist Harsha murder case in Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X