Get Updates
Get notified of breaking news, exclusive insights, and must-see stories!

ಭಜರಂಗ ದಳ ಕಾರ್ಯಕರ್ತನ ಹತ್ಯೆ; ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ, ಫೆಬ್ರವರಿ 21: ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಲಾಗಿದ್ದು, ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸೆಕ್ಷನ್ 144 ಅನ್ವಯ ನಗರದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಹರ್ಷ (22) ಕೊಲೆಯಾದ ದುರ್ದೈವಿಯಾಗಿದ್ದು, ಶಿವಮೊಗ್ಗ ನಗರದ ಎನ್.ಟಿ. ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ.

ಹೇಗಾಯ್ತು ಘಟನೆ?
ಯುವಕರ ಗುಂಪೊಂದು ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹರ್ಷ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

Bajrang Dal Activist Killed; DC Issued Order Prohibition in Shivamogga

ಬಿಗುವಿನ ವಾತಾವರಣ
ಹರ್ಷ, ಭಜರಂಗದಳ ಸಂಘಟನೆಯಲ್ಲಿ ಕಳೆದ ಐದು ವರ್ಷಗಳಿಂದ ತೊಡಗಿಸಿಕೊಂಡಿದ್ದ. ಆತನ ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹತ್ಯೆ ವಿಚಾರ ತಿಳಿಯುತ್ತಿದ್ದ ಹಾಗೆ ಶಿವಮೊಗ್ಗ ನಗರದಲ್ಲಿ ಚಿತ್ರಣ ದಿಢೀರ್ ಬದಲಾಗಿದೆ. ತಕ್ಷಣ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಗರದಾದ್ಯಂತ ಅಂಗಡಿ, ಹೊಟೇಲ್‌ಗಳನ್ನು ಬಂದ್ ಮಾಡಿಸಿದ್ದಾರೆ. ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಾಗಿದೆ.

Bajrang Dal Activist Killed; DC Issued Order Prohibition in Shivamogga

ರಾತ್ರೋರಾತ್ರಿ ಐಜಿಪಿ ಆಗಮನ
ಭಜರಂಗ ದಳ ಕಾರ್ಯಕರ್ತನ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೂರ್ವ ವಲಯ ಐಜಿಪಿ ಆಗಮಿಸಿದ್ದಾರೆ. ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರು ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ.

ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರಿಂದ ಪರಿಸ್ಥಿತಿ ಮತ್ತು ಬಂದೋಬಸ್ತ್ ಕುರಿತು ಮಾಹಿತಿ ಪಡೆದಿದ್ದಾರೆ. ಅಲ್ಲದೆ ಶಿವಮೊಗ್ಗ ನಗರದಲ್ಲಿ ಗಸ್ತು ನಡೆಸಿದರು.

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ
ಹತ್ಯೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಫೆ.23ರ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಬಿಗುವಿನ ವಾತಾವರಣ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

Bajrang Dal Activist Killed; DC Issued Order Prohibition in Shivamogga

ವಾಹನಗಳಿಗೆ ಬೆಂಕಿ, ಪ್ರಕ್ಷುಬ್ಧ ವಾತಾವರಣ
ಹರ್ಷನ ಹತ್ಯೆ ಬಳಿಕ ಶಿವಮೊಗ್ಗ ನಗರದ ವಿವಿಧೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರವಿವರ್ಮಾ ಬೀದಿ, ಆಜಾದ್ ನಗರದಲ್ಲಿ ಜನ ಗುಂಪುಗೂಡಿದ್ದರು. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಹಿತಕರ ಘಟನೆ ನಡೆಯದಂತೆ ತಡೆಯಲು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ರಾತ್ರಿ ವೇಳೆ ಬೈಕ್ ಸಂಚಾರ ನಿಷೇಧ
ನಿಷೇಧಾಜ್ಞೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಮೆರವಣಿಗೆ, ಪ್ರತಿಭಟನೆ ಸೇರಿದಂತೆ ಎಲ್ಲಾ ಬಗೆಯ ಸಭೆ, ಸಮಾರಂಭಗಳನ್ನು ನಿಷೇಧ ಮಾಡಲಾಗಿದೆ. ಶಸ್ತ್ರಗಳು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಒಯ್ಯುವುದು, ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಒಯ್ಯುವಂತಿಲ್ಲ.

ನಿಷೇಧಾಜ್ಞೆ ಜಾರಿಯಲ್ಲಿ ಇರುವ ಅವಧಿಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ದ್ವಿಚಕ್ರ ವಾಹನ ಸಂಚಾರ ನಿಷೇಧಿಸಲಾಗಿದೆ. ತುರ್ತು ಸಂದರ್ಭ ದ್ವಿಚಕ್ರ ವಾಹನಗಳ ಸಂಚಾರ ಮಾಡುವವರು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ಪಾಸ್ ಪಡೆಯಬೇಕು. ಎಲ್ಲಾ ಅಂಗಡಿಗಳ ಬಾಗಿಲು ಮತ್ತು ಚಿತ್ರಮಂದಿರ ಪ್ರದರ್ಶನವನ್ನು ರಾತ್ರಿ 9 ಗಂಟೆಯೊಳಗೆ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Recommended Video

      Rohit Sharma Lifestyle: 200 ಕೋಟಿ ರೂ. ಒಡೆಯ ರೋಹಿತ್ ಶರ್ಮಾ ಲೈಫ್ ಸ್ಟೈಲ್ ಹೇಗಿದೆ ಗೊತ್ತಾ? | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+