Breaking: ಆಗುಂಬೆ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ಮತ್ತೆ ವಿಸ್ತರಣೆ
ಶಿವಮೊಗ್ಗ, ಆಗಸ್ಟ್ 30: ಆಗುಂಬೆ ಘಾಟ್‌ನಲ್ಲಿ ಭಾರೀ ವಾಹನ ಸಂಚಾರ ನಿಷೇಧದ ಆದೇಶವನ್ನು ಇನ್ನೂ ಒಂದು ತಿಂಗಳು ವಿಸ್ತರಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿತ್ತು. ಘಾಟಿಯ 11ನೇ ತಿರುವಿನಲ್ಲಿ ಭೂ ಕುಸಿತ ಉಂಟಾಗಿತ್ತು. ಈ ಹಿನ್ನೆಲೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿತ್ತು. ಆಗಸ್ಟ್ 31ರವರೆಗೆ ಈ ನಿಷೇಧ ವಿಧಿಸಲಾಗಿತ್ತು. ಆದರೆ ಈ ಭಾಗದಲ್ಲಿ ಮಳೆ ಮುಂದುವರೆದಿದೆ. ಅಲ್ಲದೆ ಭೂ ಕುಸಿತದ ಸಾಧ್ಯತೆಯು ಇದೆ. ಹಾಗಾಗಿ ಭಾರೀ ವಾಹನ ಸಂಚಾರ ನಿಷೇಧವನ್ನು ವಿಸ್ತರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು.
ಆಗುಂಬೆ ಘಾಟ್‌ನಲ್ಲಿ ಭಾರೀ ವಾಹನ ಸಂಚಾರ ನಿಷೇಧದ ಆದೇಶವನ್ನು ವಿಸ್ತರಿಸಲಾಗಿದೆ. ಸೆಪ್ಟೆಂಬರ್ 30ರವರೆಗೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

ಸದ್ಯ ಘಾಟ್‌ನಲ್ಲಿ ಲಘು ವಾಹನಗಳು ಮತ್ತು ಬಸ್ಸುಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸಾವಿರಾರು ಎಕರೆ ಬೆಳನಾಶ; ಸೋಮವಾರ ಸುರಿದ ಭಾರೀ ಮಳೆಗೆ ಭದ್ರಾ ಎಡದಂಡೆ ಕಾಲುವೆಯ ತಡೆಗೋಡೆ ಒಡೆದು ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಭತ್ತ, ಅಡಿಕೆ ಸೇರಿದಂತೆ ಹಲವು ಬೆಳೆ ಹಾನಿಗೊಳಗಾಗಿವೆ. ಭಾರೀ ಮಳೆ ಪರಿಣಾಮ ಜಿಲ್ಲೆಯ ಬಹುತೇಕ ಕೆರೆ ಕೋಡಿಗಳು ತುಂಬಿ ಹರಿಯುತ್ತಿರುವುದರಿಂದ ಕಾಲುವೆ ತಡೆಗೋಡೆ ಒಡೆದಿದೆ ಎಂದು ತಿಳಿದುಬಂದಿದೆ.

ಇನ್ನೂ ಜುಲೈ ಮತ್ತು ಆಗಸ್ಟ್ ಎರಡು ತಿಂಗಳು ಸೇರಿ ಜಿಲ್ಲೆಯಲ್ಲಿ ಸುರಿದಿರುವ ಮುಂಗಾರು ಹಂಗಾಮಿನಲ್ಲಿ 3,291 ಹೆಕ್ಟೇರ್ ತೋಟಗಾರಿಕೆ ಹಾಗೂ ಕೃಷಿ ಬೆಳಗಳು ಹಾನಿಗೊಳಗಾಗಿವೆ. ಜಿಲ್ಲೆಯಲ್ಲಿ ಈ ಎರಡು ತಿಂಗಳಲ್ಲಿ 21 ಕೋಟಿ ರೂ ನಷ್ಟೂ ಬೆಳೆ ಹಾನಿಯಾಗಿದೆ.












Click it and Unblock the Notifications