Get Updates
Get notified of breaking news, exclusive insights, and must-see stories!

ಒಳಮೀಸಲಾತಿ ಕಿಚ್ಚು: ಬಂಜಾರ ಸಮುದಾಯದವರಿಂದ BSY ಮನೆ ಮೇಲೆ ಕಲ್ಲು ತೂರಾಟ: ಶಿಕಾರಿಪುರದಲ್ಲಿ ಸೆಕ್ಷನ್‌ 144 ಜಾರಿ

ಶಿವಮೊಗ್ಗ, ಮಾರ್ಚ್‌, 27: ಸೋಮವಾರ (ಮಾರ್ಚ್‌ 27) ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದವರು ಕಲ್ಲು ತೂರಾಟ ನಡೆಸಿದ್ದಾರೆ. ರಾಜ್ಯ ಸರ್ಕಾರ ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಘೋಷಿಸಿದ್ದು, ಇದನ್ನು ಖಂಡಿಸಿ ಬಂಜಾರ ಸಮುದಾಯದ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಕಾರಣ ನಗರದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿ ಮಾಡಲಾಗಿದೆ.

ಸರ್ಕಲ್‌ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸರಿಗೆ ಗಾಯ

ಕಲ್ಲೇಟಿನಿಂದ ಸರ್ಕಲ್‌ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯರು ಸೇರಿದಂತೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರವನ್ನು ಮಾಡಿದರು. ಅಲ್ಲದೇ ಈ ವೇಳೆ ಬಂಜಾರ ಸಮುದಾಯದ ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Banjara community attack BS Yediyurappas house ; Section 144 Issued in Shikaripur

ಮತ್ತೊಂದೆಡೆ ಕೆಲವು ಯುವಕರು ಬಿ.ಎಸ್‌.ಯಡಿಯೂರಪ್ಪನವರ ಮನೆ ಬಳಿ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ ಕಾರಣ ಮನೆಯ ಕಿಟಕಿ, ಗಾಜುಗಳಿಗೆ ಹಾನಿಯಾಗಿದ್ದು, ಪೊಲೀಸರು ಕಲ್ಲು ತೂರಿದವರ ವಿರುದ್ಧ ಕ್ರಮ ಜರುಗಿಸಿದ್ದಾರೆ. ಆದರೂ ಸ್ಥಳದಲ್ಲಿ ಪರಿಸ್ಥಿತಿ ಕೈಮೀರಿದ್ದು, ಇದನ್ನು ಗಮನಿಸಿದ ಅಧಿಕಾರಿಗಳು ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ.

ಬಂಜಾರ ಸಮುದಾಯಕ್ಕೆ ಸೇರಿದ ಪರಿಶಿಷ್ಟ ಜಾತಿಗಳಿಗೆ ಕಡಿಮೆ ಮೀಸಲಾತಿ ನೀಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿಗೆ ಸಂಬಂಧಿಸಿದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕಳೆದ ವಾರ ನಿರ್ಧರಿಸಿತ್ತು.

Banjara community attack BS Yediyurappas house ; Section 144 Issued in Shikaripur

ಪರಿಶಿಷ್ಟ ಜಾತಿಗೆ ಶೇಕಡಾ 15 ರಿಂದ ಶೇಕಡಾ 17ಕ್ಕೆ ಮೀಸಲಾತಿ ಹೆಚ್ಚಿಸಿದ ನಂತರ ಸಿಎಂ ಬಸವರಾಜ ಬೊಮ್ಮಾಯಿಯವರು ಎಸ್‌ಸಿ ಎಡ ಪ್ರವರ್ಗಕ್ಕೆ ಶೇಕಡಾ 6, ಎಸ್‌ಸಿ ಬಲ ಪಂಗಡಕ್ಕೆ ಶೇಕಡಾ 5.5, ಅಸ್ಪೃಶ್ಯರಿಗೆ ಶೇಕಡಾ 4.5 ಮತ್ತು ಇತರರಿಗೆ ಶೇಕಡಾ 1ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಈ ಪ್ರಸ್ತಾವನೆಯನ್ನು ಸಂವಿಧಾನದ ಒಂಬತ್ತನೇ ಶೆಡ್ಯೂಲ್‌ಗೆ ಸೇರಿಸುವಂತೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ ಎನ್ನಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+