ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕಾರಿಪುರದಿಂದ ಚುನಾವಣಾ ಕಣಕ್ಕೆ ಬಿ.ಸಿ.ಪಾಟೀಲ್?

|
Google Oneindia Kannada News

ಶಿವಮೊಗ್ಗ, ಜು.13 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಿರೇಕೆರೂರು ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದ ಕೌರವ ಖ್ಯಾತಿಯ ಬಿ.ಸಿ.ಪಾಟೀಲ್ ಶಿಕಾರಿಪುರ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ.

ಶಿವಮೊಗ್ಗ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಯಾಗಿ ಬಿ.ಸಿ.ಪಾಟೀಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

BC Patil

ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗದ ಮಾಜಿ ಸಂಸದ ಮತ್ತು ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳಿವೆ. ಅವರಿಗೆ ಪ್ರಬಲ ಪೈಪೋಟಿ ನೀಡಲು ಬಿ.ಸಿ.ಪಾಟೀಲ್ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಹಬ್ಬಿವೆ. [ಶಾಸಕ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ]

ಆಗಸ್ಟ್ ತಿಂಗಳಿನಲ್ಲಿ ಶಿಕಾರಿಪುರ, ಬಳ್ಳಾರಿ ಗ್ರಾಮಾಂತರ ಮತ್ತು ಚಿಕ್ಕೋಡಿ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಮೂರು ಕ್ಷೇತ್ರಗಳನ್ನು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದ್ದು, ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಈ ಭಾಗವಾಗಿಯೇ ಕೌರವ ಖ್ಯಾತಿಯ ಪಾಟೀಲ್ ರನ್ನು ಶಿಕಾರಿಪುರಕ್ಕೆ ಕರೆತರಲು ಚಿಂತನೆ ನಡೆಸಿದೆ. [ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ]

2013ರ ಚುನಾವಣೆಯಲ್ಲಿ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ ಸೋಲನುಭವಿಸಿದ್ದರು. ಈ ಬಾರಿ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಅವರಿಗೆ ಪೈಪೋಟಿ ನೀಡಿಲು ಮಾಜಿ ಶಾಸಕ ಬಿ.ಸಿ.ಪಾಟೀಲ್ ರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಿರೇಕೆರೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಸಿ.ಪಾಟೀಲ್ 50,017 ಮತಗಳನ್ನು ಪಡೆದಿದ್ದರು. ಆದರೆ, ಕೆಜೆಪಿ ಅಭ್ಯರ್ಥಿ ಯು.ಬಿ.ಬಣಕಾರ್ 52,623 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಆದ್ದರಿಂದ ಈ ಬಾರಿ ಪಾಟೀಲರನ್ನು ಶಿಕಾರಿಪುರಕ್ಕೆ ಕರೆತರಲು ಕಾಂಗ್ರೆಸ್ ನಿರ್ಧರಿಸಿದೆ. [ಮಾಹಿತಿ : indiavotes.com]

English summary
Hirekerur constituency former MLA B.C.Patil may contest for by-election from Shikarpur constituency as a Congress candidate. After electing as Shimoga MP Shikarpur MLA BS Yeddyurappa resigned for MLA post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X