ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಬ್ಯಾನರ್ ಕಟ್ಟಿದ ಗ್ರಾಮಸ್ಥರು; ಕಾರಣವೇನು?

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 14: ತಮ್ಮ ಬೇಡಿಕೆ ಈಡೇರುವವರೆಗೂ ನಮ್ಮೂರ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಹೀಗೆಂದು ಗ್ರಾಮಸ್ಥರು ಪಟ್ಟು ಹಿಡಿದು, ಪ್ರತಿಭಟನೆ ಆರಂಭಿಸಿದ್ದಾರೆ. ಇದು ಶಿವಮೊಗ್ಗ ಜಿಲ್ಲಾಡಳಿತವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಪ್ಪದ ಗ್ರಾಮಸ್ಥರು ಹೀಗೊಂದು ವಿಭಿನ್ನ ಹೋರಾಟ ಆರಂಭಿಸಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೂ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಊರಿನ ಮುಂದೆ ಬ್ಯಾನರ್ ಕಟ್ಟಿದ್ದಾರೆ.

ಗ್ರಾಮಸ್ಥರು ಹೀಗೆ ಪಟ್ಟು ಹಿಡಿದಿದ್ದೇಕೆ?
ಬೆಳ್ಳಿಕೊಪ್ಪ ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯದ ಅಂಗಡಿ ಆರಂಭಿಸಲಾಗಿದೆ. ಗಣೇಶ ಚತುರ್ಥಿಯಂದು ಮಳಿಗೆ ಉದ್ಘಾಟನೆಯಾಗಿದ್ದು, ವ್ಯಾಪಾರವು ಶುರುವಾಗಿದೆ. ಇದಕ್ಕೆ ಬೆಳ್ಳಿಕೊಪ್ಪ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಮ್ಮೂರಿನಿಂದ ಮದ್ಯದಂಗಡಿ ತೆರವು ಮಾಡಬೇಕು ಎಂದು ಪಟ್ಟು ಹಿಡಿದು, ವಿಭಿನ್ನವಾಗಿ ಪ್ರತಿಭಟನೆ ಆರಂಭಿಸಿದ್ದಾರೆ.

Shivamogga: Bellikoppa Villagers Protest Against Opening Of MSIL Liquor Store

ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ
"ಬೆಳ್ಳಿಕೊಪ್ಪ ಗ್ರಾಮದಲ್ಲಿ ಸರ್ಕಾರ ಶಾಲೆ ಇದೆ. ಗ್ರಾಮದ ಬಹುತೇಕ ಮಕ್ಕಳು ಇದೆ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 'ಮದ್ಯದಂಗಡಿಯು ಶಾಲೆಯಿಂದ 500 ಮೀಟರ್'ಗಿಂತಲೂ ದೂರವಿದೆ. ಆದರೆ ಶಾಲೆಗೆ ತೆರಳಬೇಕಾದರೆ ಮಕ್ಕಳು ಮದ್ಯದಂಗಡಿ ಮುಂದೆಯೇ ಹೋಗಬೇಕು. ಇದು ಮಕ್ಕಳ ಮೇಲೆ ಪರಿಣಾಮ ಉಂಟು ಮಾಡಲಿದೆ. ಆದ್ದರಿಂದ ನಮ್ಮೂರ ಹೆಣ್ಣು ಮಕ್ಕಳನ್ನು ನಾವು ಶಾಲೆಗೆ ಕಳುಹಿಸುವುದಿಲ್ಲ," ಎಂದು ಗ್ರಾಮಸ್ಥ ಸಿರಿವಾಳ ದಿನೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಊರ ಮುಂದೆ ಪ್ರತಿಭಟನೆ
ಎಂಎಸ್ಐಎಲ್ ಮದ್ಯದಂಗಡಿ ಆರಂಭಿಸಿರುವುದಕ್ಕೆ ಬೆಳ್ಳಿಕೊಪ್ಪ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇದನ್ನು ಕೂಡಲೇ ಸ್ಥಳಾಂತರ ಮಾಡಬೇಕು ಎಂದು ಗ್ರಾಮದ ಮುಂದೆ ಪ್ರತಿಭಟನೆ ನಡೆಸಲಾಯಿತು. ಹಂತ ಹಂತವಾಗಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆಯು ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ.

Shivamogga: Bellikoppa Villagers Protest Against Opening Of MSIL Liquor Store

ನಿರಂತರ ಕಾಡುತ್ತಿದೆ ಮದ್ಯದಂಗಡಿ
ಬೆಳ್ಳಿಕೊಪ್ಪ ಗ್ರಾಮಕ್ಕೆ ಮದ್ಯದಂಗಡಿ ಕಾಟ ಹೊಸತಲ್ಲ. ಈ ಹಿಂದೆಯು ಮದ್ಯದಂಗಡಿ ವಿರುದ್ಧ ಹೋರಾಟ ನಡೆದಿತ್ತು. ಮದ್ಯದಂಗಡಿ ಆರಂಭಕ್ಕೆ ನಿರ್ಧರಿಸಿದ್ದಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಕಳೆದ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಅಧಿಕಾರಿಗಳು, ಮದ್ಯದಂಗಡಿಗೆ ಅನುಮತಿ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಕೆಲವೇ ತಿಂಗಳಲ್ಲಿ ಮದ್ಯದಂಗಡಿ ಆರಂಭಿಸಲಾಗಿದೆ.

Shivamogga: Bellikoppa Villagers Protest Against Opening Of MSIL Liquor Store

ಎಂಎಸ್ಐಎಲ್ ಮದ್ಯದಂಗಡಿ ಆರಂಭಿಸಿದ್ದಕ್ಕೆ ಸರ್ಕಾರ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯದಂಗಡಿ ಎತ್ತಂಗಡಿ ಮಾಡುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.

English summary
Villagers have protested against the opening of the MSIL Liquor Store at Bellikoppa in Sagara taluk of Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X