ಜೆಡಿಎಸ್ ಗೆ ಬೇಳೂರು ಗೋಪಾಲಕೃಷ್ಣ ಗುಡ್ ಬೈ

ಶುಕ್ರವಾರ ಸಾಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೇಳೂರು ಗೋಪಾಕೃಷ್ಣ, ತಾವು ಈಗಾಗಲೇ ಜೆಡಿಎಸ್ ತೊರೆದಿದ್ದು, ಕ್ಷೇತ್ರದ ಜನತೆಯ ಅಭಿಪ್ರಾಯ ಸಂಗ್ರಹಿಸಿದ ನಂತರ ಬಿಜೆಪಿ ಅಥವ ಕಾಂಗ್ರೆಸ್ ಸೇರುವುದಾಗಿ ತಿಳಿಸಿದರು. ರಾಷ್ಟ್ರೀಯ ಪಕ್ಷ ಸೇರುವುದು ತಮ್ಮ ಆಯ್ಕೆ ಆಗಿದೆ. ಯಾವ ಪಕ್ಷ ಎಂದು ಶೀಘ್ರದಲ್ಲೇ ತಿಳಿಸುವುದಾಗಿ ಹೇಳಿದರು. [ಜೆಡಿಎಸ್ ತೊರೆಯಲು ಸಜ್ಜಾದ ಬೇಳೂರು]
ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೀಘ್ರವೇ ಪ್ರವಾಸ ಕೈಗೊಳ್ಳುತ್ತೇನೆ. ಜನತೆಯ ಅಭಿಪ್ರಾಯ ಸಂಗ್ರಹಿಸಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ. ಈಗಿರುವ ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನು ಕ್ಷೇತ್ರದ ಜನತೆ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಬೇಳೂರು ಗೋಪಾಲಕೃಷ್ಣ, ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಜೆಡಿಎಸ್ ತೊರೆದು ಬೇರೆ ಪಕ್ಷ ಸೇರಲು ಸಿದ್ಧತೆ ನಡೆಸಿದ್ದರು. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. [ಗೀತಾ ಶಿವರಾಜ್ ಕುಮಾರ್ ಕಣಕ್ಕೆ?]
ಆದರೆ, ಜೆಡಿಎಸ್ ಬಂಗಾರಪ್ಪ ಕುಟುಂಬ ಸದಸ್ಯರಿಗೆ ಲೋಕಸಭೆ ಟಿಕೆಟ್ ನೀಡಲು ನಿರ್ಧರಿಸಿದ್ದರಿಂದ ಅಸಮಾಧಾನಗೊಂಡ, ಬೇಳೂರು ಗೋಪಾಲಕೃಷ್ಣ ಸಮಾಜವಾದಿ ಪಕ್ಷ ಸೇರುವ ಹವಣಿಕೆಯಲ್ಲಿದ್ದರು. ಸಮಾಜವಾದಿ ಪಕ್ಷ ಶಿವಮೊಗ್ಗದಿಂದ ಟಿಕೆಟ್ ನೀಡುವ ಭರವಸೆಯನ್ನು ನೀಡಿತ್ತು. ಆದರೆ, ರಾಷ್ಟ್ರೀಯ ಪಕ್ಷವನ್ನು ಸೇರುತ್ತೇನೆ ಎಂದು ಹೇಳುವ ಮೂಲಕ ಅವರು ಮತ್ತೊಮ್ಮೆ ಬಿಜೆಪಿ ಅಥವ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.












Click it and Unblock the Notifications