ಭದ್ರಾ ಜಲಾಶಯದಿಂದ ನದಿಗೆ ನೀರು; ರೈತರಿಗೆ ಎಚ್ಚರಿಕೆ

ಶಿವಮೊಗ್ಗ, ಫೆಬ್ರವರಿ 02: ಭದ್ರಾ ಜಲಾಶಯದಿಂದ ಫೆಬ್ರವರಿ 5 ರಿಂದ 10ರ ತನಕ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದ್ದರಿಂದ ರೈತರಿಗೆ ಮತ್ತು ಜನರಿಗೆ ಎಚ್ಚರಿಕೆ ನೀಡಲಾಗಿದೆ.

2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು ನೀರು ಬಿಡುಗಡೆ ಮಾಡಲಾಗುತ್ತಿದೆ.

Bhadra Dam Water Release From February 5 Warning Issued

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗಭದ್ರಾ ನದಿಗೆ ದಿನಾಂಕ 5/2/2024ರ ರಾತ್ರಿ 10 ರಿಂದ 10/2/2024ರ ರಾತ್ರಿ 10 ಗಂಟೆಯವರೆಗೆ ಪ್ರತಿ ದಿನ 2000 ಕ್ಯೂಸೆಕ್‌ನಂತೆ ಒಟ್ಟು 12,000 ಕ್ಯೂಸೆಕ್ ನೀರನ್ನು ಹರಿಸಲಾಗುತ್ತದೆ.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

ತುಂಗಭದ್ರಾ ನದಿಗೆ ನೀರು ಹರಿಸಿದಾಗ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ನೀರನ ಕೊರತೆ: ಭದ್ರಾ ಡ್ಯಾಂ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಲಕ್ಷಾಂತರ ಹೆಕ್ಟೇರ್ ಜಲಾನಯಾನ ಪ್ರದೇಶವಿದೆ. ಆದರೆ ಈ ಬಾರಿ ನೈಋತ್ಯ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಭದ್ರೆಯ ಒಡಲು ತುಂಬಿಲ್ಲ. ಆದ್ದರಿಂದ ಮಳೆಗಾಲ ಬರುವ ತನಕ ಡ್ಯಾಂನಲ್ಲಿ ಸಂಗ್ರಹವಾಗಿರುವ ನೀರನ್ನು ಎಚ್ಚರಿಕೆಯಿಂದ ಬಳಕೆ ಮಾಡಬೇಕಿದೆ.

ಶಿವಮೊಗ್ಗ ಜಿಲ್ಲಾಡಳಿತ ಮುಂಬರುವ ಮುಂಗಾರು ಮಳೆ ಸ್ವಲ್ಪ ವಿಳಂಬವಾದರೂ ಅಲ್ಲಿಯವರೆಗೆ ನೀರು ನೀಡಲು ಅನುಕೂಲವಾಗುವಂತೆ ನೀರು ವಿತರಣೆಯ ಯೋಜನೆ ಹಾಕಿಕೊಳ್ಳಬೇಕು. ಬೇಸಿಗೆಗೆ ನೀರು ಪೂರೈಕೆಯಾಗುವಂತೆ ನಿರ್ವಹಣೆ ಮಾಡುವ ಅಗತ್ಯವಿದೆ ಎಂದು ಹೇಳಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಛೇರಿಯಲ್ಲಿ 2023-24 ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯನ್ನು ನಡೆಸಿದ್ದಾರೆ. ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಸಿ ಚರ್ಚಿಸಿ ಕಾಲುವೆಗಳಿಗೆ ನೀರು ಹರಿಸುವ ದಿನಾಂಕ ಅಂತಿಮಗೊಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಮಾರ್ಚ್ ನಂತರ ಬೇಸಿಗೆ ಹೆಚ್ಚಲಿದ್ದು, ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ಕಷ್ಟವಾಗಬಹುದು. ಆದ್ದರಿಂದ ಕಟ್ಟಕಡೆಯ ಅಚ್ಚುಕಟ್ಟುದಾರರ ಅನುಕೂಲವನ್ನೂ ಪರಿಗಣಿಸಿ ಈಗ ಸ್ವಲ್ಪ ತಡವಾಗಿ ನೀರು ಹರಿಸುವ ಬಗ್ಗೆ ಅಧಿಕಾರಿಗಳು, ರೈತರೊಂದಿಗೆ ಚರ್ಚಿಸಲಾಗಿದೆ. ನೀರಿನ ಅಭಾವವಿರುವ ಕಾರಣ ಪ್ರಸ್ತುತ ರೈತರು ಭತ್ತ ಬೆಳೆಯಬಾರದು ಎಂದು ಸಲಹೆ ನೀಡಲಾಗಿದೆ.

ಪ್ರಸ್ತುತ ಜಲಾಶಯದಲ್ಲಿರುವ ನೀರನ್ನು ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಸಂರಕ್ಷಣೆಗೆ ಬಳಕೆ ಮಾಡಿಕೊಳ್ಳಬಹುದಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಭತ್ತ ಬೆಳೆಯದಿರುವಂತೆ ರೈತರಿಗೆ ಸೂಚನೆ ನೀಡಲಾಗಿದೆ. ಮೇ 15ರವರೆಗೆ ನೀರು ಬೇಕೇ ಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದಾರೆ.

47 ದಿನಗಳಿಗೆ ಆಗಬಹುದಾದ ನೀರನ್ನು ಸಮರ್ಪಕವಾಗಿ ನೀಡಲು ಜನವರಿ 15 ರಿಂದ ಆನ್ ಮತ್ತು ಆಫ್ ಮಾದರಿಯಲ್ಲಿ ಮೇ ತಿಂಗಳವರೆಗೆ ನೀರು ನೀಡುವುದು ಉತ್ತಮ ಹಾಗೂ ತುಂಗಾ ನದಿಯಿಂದ ಅಪ್ಪರ್ ಭದ್ರಾ ಯೋಜನೆಗೆ ನೀರು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+